ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ

Public TV
1 Min Read

ಹಾವೇರಿ: ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು, ಕಾರ್ಯಕ್ಷಮತೆಯಿಂದ ಕೆಲಸ ಮಾಡುವವರು ಎಂದು ಸಂಪುಟ ಸಹೋದ್ಯೋಗಿಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ವೇಳೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಸಿಎಂ ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವ ಸೆಪ್ಟೆಂಬರ್ 5 ರಂದು ತೀರ್ಮಾನ : ಬೊಮ್ಮಾಯಿ

ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಪ್ರಶಂಸಿದ್ದಾರೆ.ಇದನ್ನೂ ಓದಿ:ಚಾಮರಾಜನಗರ ಡಿಸಿ ವಿರುದ್ಧ ಡಿಕೆಶಿ ಕಿಡಿ

ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಕೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದೆ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲ್ ನನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ:ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್

Share This Article
Leave a Comment

Leave a Reply

Your email address will not be published. Required fields are marked *