ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

Public TV
1 Min Read

ಹುಬ್ಬಳ್ಳಿ: ಗೃಹ ಸಚಿವ ಅಮಿತ್ ಶಾ ಇಂದು ಹುಬ್ಬಳ್ಳಿಗೆ ಆಗಮಿಸಿದ್ದು, ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಲೋಕಸಭಾ ಅಧ್ಯಕ್ಷ ಓಂ ಪ್ರಕಾಶ್ ಬಿರ್ಲಾ ಹಾಗೂ ಕೇಂದ್ರ ಸರ್ಕಾರದ ಸಚಿವರುಗಳೊಂದಿಗೆ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿರುವ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದರು. ಈ ವೇಳೆ ಬೊಮ್ಮಾಯಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರನ್ನೆಲ್ಲ ಆತ್ಮೀಯವಾಗಿ ಬರಮಾಡಿಕೊಂಡರು. ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

ಅಮಿತ್ ಶಾ ಅವರಿಗೆ ಶಾಲುಹೊದಿಸಿ, ಹಾರ ತೊಡಿಸಿದ ಸಿಎಂ ಲೇಖಕ ದೀಪಕ್ ಚೋಪ್ರಾ ಬರೆದಿರುವ ‘ಬುದ್ಧ- ದ ಸ್ಟೋರಿ ಆಫ್ ಎನಲೈಟ್‍ಮೆಂಟ್’ ಪುಸ್ತಕವನ್ನು ನೀಡಿದರು. ನಂತರ ಗೃಹ ಸಚಿವರೊಂದಿಗೆ ವಿಶೇಷ ಹೆಲಿಕಾಪ್ಟರ್ ಮೂಲಕ ದಾವಣಗೆರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.

ಲೋಕಸಭಾಧ್ಯಕ್ಷರು, ಅಮಿತ್ ಶಾ ಹಾಗೂ ಇತರೆ ಸಚಿವರು ಸಂಜೆ ಹುಬ್ಬಳ್ಳಿ ಡೆನ್ನಿಸನ್ ಹೋಟೆಲ್‍ನಲ್ಲಿ ಆಯೋಜಿಸಲಾಗಿರುವ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ಅರ್ಪಿತಾ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ:ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುವೆ: ಸಿಎಂ

ಈ ಸಂದರ್ಭದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯೂಷ್ ಗೊಯೆಲ್, ಕೇಂದ್ರ ಶಿಕ್ಷಣ ಸಚಿವ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧಮೇರ್ಂದ್ರ ಪ್ರಧಾನ್, ಕೇಂದ್ರ ರಾಜ್ಯ ರೈಲ್ವೇ ಖಾತೆ ಸಚಿವ ರಾವ್ ಸಾಹೇಬ್ ಪಾಟೀಲ್ ದವನೆ, ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ:ವಿಜಯಪುರ ವಿಮಾನ ನಿಲ್ದಾಣಕ್ಕೆ 125 ಕೋಟಿ: ಗೋವಿಂದ ಕಾರಜೋಳ

Share This Article
Leave a Comment

Leave a Reply

Your email address will not be published. Required fields are marked *