ಕಾಂಗ್ರೆಸ್ಸಿನವರು ತಲೆ ತಿರುಕರು- ಸಿಎಂ ಬಿಎಸ್‍ವೈ

Public TV
1 Min Read

ನವದೆಹಲಿ: ಕಾಂಗ್ರೆಸ್ಸಿನವರು ತಲೆತಿರುಕರು. ಹೀಗಾಗಿ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪ ಸಂಬಂಧ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

ಕೇಂದ್ರ ಸರ್ಕಾರ ಶೀಘ್ರವೇ ಪರಿಹಾರ ಬಿಡುಗಡೆ ಮಾಡಲಿದೆ. ಈಗಾಗಲೇ ಗೃಹ ಮತ್ತು ವಿತ್ತ ಸಚಿವರು ಪರಿಶೀಲನೆ ನಡೆಸಿದ್ದಾರೆ. ಪ್ರಧಾನಿಯವರಿಗೂ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ತಾರತಮ್ಯ ಮಾಡುವುದಿಲ್ಲ. ಇಂದು ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ. ಸಭೆಯ ಬಳಿಕ ರಾಜ್ಯಕ್ಕೆ ಪರಿಹಾರ ಧನ ಬಿಡುಗಡೆಯಾಗಲಿದೆ. ಬೇರೆ ಬೇರೆ ಕಡೆಯಿಂದಲೂ ಸಾಕಷ್ಟು ನೆರವು ಬಂದಿದೆ. ಅದನ್ನ ಬಳಿಸಿಕೊಂಡು ಪರಿಹಾರ ಕಾರ್ಯಗಳನ್ನು ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಇಂದು ಖಂಡಿತಾ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂಪುಟ ರಚನೆ ಬಗ್ಗೆ ಚರ್ಚೆ ಮಾಡುತ್ತೇನೆ. ಈ ವೇಳೆ ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಸಿಗುತ್ತದೆ ಎಂಬ ವಿಶ್ವಾಸವಿದೆ. ನಾಳೆ ಅಥವಾ ನಾಳಿದ್ದು ಸಂಪುಟ ವಿಸ್ತರಣೆ ಆಗಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ರಾಜ್ಯದಲ್ಲಿ ಹೈಅಲರ್ಟ್ ವಿಚಾರದ ಕುರಿತು ಮಾತನಾಡಿದ ಸಿಎಂ, ಕೇಂದ್ರದಿಂದ ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭದ್ರತೆ ಹೆಚ್ಚು ಮಾಡಲಾಗಿದೆ. ನಿನ್ನೆ ಸಂಜೆಯಿಂದ ಭದ್ರತೆ ಹೆಚ್ಚಿಸಿದೆ. ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿದೆ. ಅಹಿತಕರ ಘಟನೆ ನಡೆಯಲ್ಲ, ನಡಿಯೋಕೆ ಬಿಡಲ್ಲ ಎಂದರು.

Share This Article
1 Comment

Leave a Reply

Your email address will not be published. Required fields are marked *