ರಾಯಚೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಬುಧವಾರ (ಆ.6) ರಾಯಚೂರು (Raichuru) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ (Hatti Gold Mine) ವಸತಿ ಸಮುಚ್ಛಯದ 998 ಕೋಟಿ ರೂ. ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ: ದಿನಕ್ಕೆ ಅಂದಾಜು 2 ಲಕ್ಷ ರೂ. ಖರ್ಚು- ಯಾವುದಕ್ಕೆ ಎಷ್ಟು?
ಲಿಂಗಸುಗೂರಿನ (Lingasuguru) ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ.
ಕಾರ್ಯಕ್ರಮದಲ್ಲಿ 998 ಕೋಟಿ ರೂ. ವೆಚ್ಚದ 952ಕ್ಕೂ ಹೆಚ್ಚು ಮನೆಗಳು ಹಾಗೂ ಆಸ್ಪತ್ರೆ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಅವರು ಅಡಿಗಲ್ಲು ಹಾಕಲಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗಣಿ ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೇರಿ ಹಲವರು ಭಾಗವಹಿಸಲಿದ್ದಾರೆ.ಇದನ್ನೂ ಓದಿ: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಸಾವಿನ ಸಂಖ್ಯೆ 4ಕ್ಕೆ ಏರಿಕೆ