ನವದೆಹಲಿ: ರಾಜ್ಯದ ನಿಯೋಗ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಲಿದೆ. ಸಿಎಂ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಪಕ್ಷ ನಾಯಕರು, ಪ್ರಧಾನಿ ಮೋದಿ ಅವರನ್ನ ಭೇಟಿಯಾಗಲಿದ್ದಾರೆ. ಕೊಡಗಿನಲ್ಲಿ ಅತಿವೃಷ್ಟಿ ಮಳೆಯಿಂದ ಸಾಕಷ್ಟು ಪ್ರಮಾಣದ ಹಾನಿಯಾಗಿದ್ದು ಹೆಚ್ಚಿನ ಪ್ರಮಾಣದಲ್ಲಿ ಕೇಂದ್ರದಿಂದ ಪರಿಹಾರ ನೀಡುವಂತೆ ನಿಯೋಗ ಮನವಿ ಮಾಡಲಿದೆ.
ಬೆಳಗ್ಗೆ 11:30 ಕ್ಕೆ ಸಿಎಂ ನೇತೃತ್ವದಲ್ಲಿ ಪ್ರಧಾನಿ ಕಚೇರಿಯಲ್ಲಿ ನಿಯೋಗ ಪ್ರಧಾನಿಯನ್ನು ಭೇಟಿಯಾಗಲಿದೆ. ನಿಯೋಗದಲ್ಲಿ ಡಿಸಿಎಂ ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಆರ್.ವಿ ದೇಶಪಾಂಡೆ, ಸಚಿವರಾದ ಕೃಷ್ಣ ಬೈರೇಗೌಡ ಭಾಗಿಯಾದ್ರೆ ವಿಪಕ್ಷ ನಾಯಕರ ಪೈಕಿ ಬಿ.ಎಸ್ ಯಡಿಯೂರಪ್ಪ ಪ್ರಧಾನಿ ಭೇಟಿಯಿಂದ ಹಿಂದೆ ಸರಿದಿದ್ದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ನಳೀನ್ ಕುಮಾರ್ ಕಟೀಲ್, ಪ್ರತಾಪಸಿಂಹ ಭಾಗವಹಿಸಲಿದ್ದಾರೆ.
ಕಳೆದ ತಿಂಗಳು ಪ್ರಧಾನಿ ಭೇಟಿಗೆ ಸಿಎಂ ಮನವಿ ಮಾಡಿದ್ರು ಆದರೆ ಪ್ರಧಾನಿ ಪ್ರವಾಸದ ಹಿನ್ನೆಲೆ ಭೇಟಿ ಸಾಧ್ಯವಾಗಿರಲಿಲ್ಲ ಗೃಹ ಸಚಿವರಿಗೆ ಮನವಿ ಮಾಡಿ ಸಿಎಂ ವಾಪಸ್ ಬಂದಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv