ಇನ್‍ವೆಸ್ಟ್ ಕರ್ನಾಟಕ 2020ರ ಕರ್ಟೈನ್ ರೈಸರ್ ಉದ್ಘಾಟನೆ

Public TV
1 Min Read

– ಜಾಗತಿಕ ಹೂಡಿಕೆದಾರರಿಗೆ ಸಿಎಂ ಆಹ್ವಾನ

ದಾವೋಸ್ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜಾಗತಿಕ ಹೂಡಿಕೆದಾರರ ಶೃಂಗಸಭೆ 2020ರ (ಆವಿಷ್ಕಾರ ಈಗ- ಅಭಿವೃದ್ದಿ ನಿರಂತರ) ಕರ್ಟೈನ್ ರೈಸರ್ ಅನ್ನು ದಾವೋಸ್ ನಲ್ಲಿ ನೆರವೇರಿಸಿದರು. ಈ ಜಾಗತಿಕ ಹೂಡಿಕೆದಾರರ ಸಮಾವೇಶವು ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಅಧಿಕೃತ ದಿನಾಂಕವನ್ನು ಸಿಎಂ ಘೋಷಿಸಿದರು. ಕರ್ಟೈನ್ ರೈಸರ್ ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ಪ್ರಮುಖ ಕೈಗಾರಿಕೊದ್ಯಮಿಗಳು, ಉದ್ಯಮಿಗಳು ಮತ್ತು ಕಂಪನಿ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ವೇಳೆ ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಪ್ರದರ್ಶಿಸಲಾಯಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು, ಜಾಗತಿಕ ವ್ಯಾಪಾರ ಮುಖಂಡರನ್ನು ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕೇಂದ್ರ ರೈಲ್ವೆ ಮತ್ತು ವಾಣಿಜ್ಯ ಸಚಿವ ಶ್ರೀ ಪಿಯೂಷ್ ಗೋಯಲ್, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ ರಮಣ ರೆಡ್ಡಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಸಿಐಐ ನ ಡೈರೆಕ್ಟರ್ ಜೆನರಲ್ ಚಂದ್ರಜೀತ್ ಬ್ಯಾನರ್ಜಿ, ಭಾರತ್ ಫೋರ್ಜ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಬಾಬಾ ಕಲ್ಯಾಣಿ, ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್‍ನ ಅಧ್ಯಕ್ಷ ಮತ್ತು ಎಂಡಿ ಶ್ರೀ ವಿಕ್ರಮ್ ಕಿರ್ಲೋಸ್ಕರ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸ್ವಿಟ್ಜಲ್ರ್ಯಾಂಡಿನ ಸಂಸತ್ ಸದಸ್ಯರ ತಂಡ ಹಾಗೂ ಸ್ವಿಸ್ – ಇಂಡಿಯಾ ಪಾರ್ಲಿಮೆಂಟೇರಿಯನ್ ಗ್ರೂಪ್ ನ ಅಧ್ಯಕ್ಷ ಡಾ ನಿಕ್ಲೂಸ್ – ಸ್ಯಾಮ್ಯೂಲ್ ಗುಗ್ಗರ್ ಸಹ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *