ನಾಡಹಬ್ಬ ದಸರಾಗೆ ಹಂಸಲೇಖರಿಂದ ಚಾಲನೆ: ಸಿಎಂ

By
1 Min Read

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ (Dasara) ಉದ್ಘಾಟನೆಯನ್ನು ಹಂಸಲೇಖ (Hamsalekha) ಅವರು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಜಿಲ್ಲೆಯ ಪ್ರವಾಸದಲ್ಲಿರುವ ಅವರು ಹರಕೆ ತೀರಿಸಲು ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಆಗಮಿಸಿದ್ದರು. ಬಳಿಕ ಚಾಮುಂಡೇಶ್ವರಿಗೆ ರೇಷ್ಮೆ ಸೀರೆ ಒಪ್ಪಿಸಲಾಯಿತು. ಇದನ್ನೂ ಓದಿ: ಲೇಟ್ ಆದ್ರೂ ಲೇಟೆಸ್ಟ್ ಆಗಿ ಒಂದೆರಡು ತಿಂಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ: ರಾಜೂ ಗೌಡ

ಗ್ಯಾರಂಟಿ ಕಾರ್ಡ್ ವಿಚಾರವಾಗಿ ಹರಕೆ ಮಾಡಲಾಗಿತ್ತು. ಈ ವಿಚಾರವಾಗಿ ಪೂಜೆ ಸಲ್ಲಿಸಿದ ಬಳಿಕ ಚಾಮುಂಡಿ ದೇವಿಯ ಮುಂಭಾಗ ಸಿಎಂ ಹಾಗೂ ಡಿಸಿಎಂ ಈಡುಗಾಯಿ ಒಡೆದರು.

ಬಳಿಕ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಜೊತೆಗಿನ ಸಂಬಂಧದ ಬಗ್ಗೆ ಮಾತನಾಡಿದರು. ವಿರೋಧ ಪಕ್ಷಗಳು ನಮ್ಮನ್ನ ಎಷ್ಟು ದೂರ ಮಾಡಲು ಯತ್ನ ಮಾಡಿತ್ತಿದ್ದಾರೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ. ವಿರೋಧ ಪಕ್ಷಗಳು ನಮ್ಮಿಬ್ಬರ ಸಂಬಂಧದ ವಿಚಾರದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಲೇ ಇರುತ್ತೀರಿ ಎಂದಿದ್ದಾರೆ.

ಬಿಜೆಪಿ ಸರ್ಕಾರದ ಹಗರಣಗಳ ವಿಚಾರವಾಗಿ ತನಿಖೆ ಮಾಡುತ್ತೇವೆ. ಇದರಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಬರುವುದಿಲ್ಲ. ಪಿಎಸ್‍ಐ ಹಗರಣ, 40% ಹಗರಣ, ಕೋವಿಡ್ ಹಗರಣ ಎಲ್ಲದನ್ನೂ ತನಿಖೆಗೆ ಒಳಪಡಿಸಿದ್ದೇವೆ. ಹಗರಣದ ಬಗ್ಗೆ ತನಿಖೆ ಮಾಡಿಸದೆ ಇವರು ತಿಂದುಕೊಂಡು ಹಾಗೇ ಹೋಗಲಿ ಎಂದು ಬಿಡಬೇಕಾ? ಅವರ ಕಾಲದಲ್ಲೇ ಹಗರಣ ತನಿಖೆಗೆ ಆಗ್ರಹಿಸಿದ್ದೇವೆ. ಅವರು ತನಿಖೆ ಮಾಡಿಸಲಿಲ್ಲ. ನಾವು ತನಿಖೆ ಮಾಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆತ – ಹಿಂಭಾಗದ ಗಾಜು ಪುಡಿ ಪುಡಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್