ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ

1 Min Read

ಬೆಂಗಳೂರು: 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ (Gilli Nata) ಅವರನ್ನು ಮುಖ್ಯಮಂತ್ರಿ‌ ಸಿದ್ದರಾಮಯ್ಯ (Siddaramaiah) ಅವರು ಅಭಿನಂದಿಸಿ, ಶುಭ ಹಾರೈಸಿದರು.

ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಸಚಿವ ಬೈರತಿ ಬಸವರಾಜ್‌, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಉಪಸ್ಥಿತರಿದ್ದರು.  ಇದನ್ನೂ ಓದಿ: ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

 

ಈ ಬಾರಿಯ ಬಿಗ್‌ಬಾಸ್‌ನಲ್ಲಿ ಗಿಲ್ಲಿ ಅವರು ವಿಜೇತರಾಗಿದ್ದರೆ ರಕ್ಷಿತಾ (Rakshita) ರನ್ನರ್‌ ಅಪ್‌, ಅಶ್ವಿನಿ ಗೌಡ (Ashwini Gowda) ಅವರು ಎರಡನೇ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದರು. ಇದನ್ನೂ ಓದಿ: ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ

ಮಂಡ್ಯದ ಮಳವಳ್ಳಿಯ ದಡದಪುರ ಗ್ರಾಮದ ಗಿಲ್ಲಿ ತಮ್ಮ ಮಾತಿನ ಮೋಡಿಯಿಂದ ಕರ್ನಾಟಕದ ಜನರ ಮನಸ್ಸು ಗೆದ್ದಿದ್ದರು. ಅತಿ ಹೆಚ್ಚು ಮತ ಪಡೆಯುವ ಮೂಲಕ ಅರ್ಹವಾಗಿಯೇ ಮೊದಲ ಸ್ಥಾನವನ್ನು ಪಡೆದರು.
Share This Article