ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Bengaluru International Film Festival) ಸಿಎಂ ಸಿದ್ದರಾಮಯ್ಯ (CM Siddaramaiah) ಚಾಲನೆ ಕೊಟ್ಟಿದ್ದಾರೆ.
ವಿಧಾನಸೌಧದಲ್ಲಿ ನಡೆದ ಚಲನಚಿತ್ರೋತ್ಸವವನ್ನು ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಇದೇ ವೇಳೆ ಚಲನಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರು ಥೀಮ್ ಬಿಡುಗಡೆ ಮಾಡಿದರು. ಇದನ್ನೂ ಓದಿ: ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ
`ಸ್ತ್ರೀ ಎಂದರೆ ಅಷ್ಟೇ ಸಾಕೇ’ ಎಂಬ ಧ್ಯೇಯ ವಾಕ್ಯದೊಂದಿಗೆ ಚಿತ್ರೋತ್ಸವ ಪ್ರಾರಂಭವಾಗಿದೆ. ನಾಳೆಯಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದ್ದು, ಫೆ.6ರವರೆಗೆ 65 ದೇಶಗಳ 225 ಚಿತ್ರಗಳು ಪ್ರದರ್ಶನವಾಗಲಿವೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ನಟಿ ರುಕ್ಮಿಣಿ ವಸಂತ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ, ಶಾಸಕ ರಿಜ್ವಾನ್ ಅರ್ಷದ್, ಸಿಎಸ್ ಶಾಲಿನಿ ರಜನೀಶ್ ಸೇರಿ ಹಲವರು ಭಾಗಿಯಾಗಿದ್ದರು.ಇದನ್ನೂ ಓದಿ: UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

