17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ

1 Min Read

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Bengaluru International Film Festival) ಸಿಎಂ ಸಿದ್ದರಾಮಯ್ಯ (CM Siddaramaiah) ಚಾಲನೆ ಕೊಟ್ಟಿದ್ದಾರೆ.

- Advertisement -

ವಿಧಾನಸೌಧದಲ್ಲಿ ನಡೆದ ಚಲನಚಿತ್ರೋತ್ಸವವನ್ನು ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಇದೇ ವೇಳೆ ಚಲನಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರು ಥೀಮ್ ಬಿಡುಗಡೆ ಮಾಡಿದರು. ಇದನ್ನೂ ಓದಿ: ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

- Advertisement -

- Advertisement -

`ಸ್ತ್ರೀ ಎಂದರೆ ಅಷ್ಟೇ ಸಾಕೇ’ ಎಂಬ ಧ್ಯೇಯ ವಾಕ್ಯದೊಂದಿಗೆ ಚಿತ್ರೋತ್ಸವ ಪ್ರಾರಂಭವಾಗಿದೆ. ನಾಳೆಯಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದ್ದು, ಫೆ.6ರವರೆಗೆ 65 ದೇಶಗಳ 225 ಚಿತ್ರಗಳು ಪ್ರದರ್ಶನವಾಗಲಿವೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದರು.

- Advertisement -

ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ನಟಿ ರುಕ್ಮಿಣಿ ವಸಂತ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ, ಶಾಸಕ ರಿಜ್ವಾನ್ ಅರ್ಷದ್, ಸಿಎಸ್ ಶಾಲಿನಿ ರಜನೀಶ್ ಸೇರಿ ಹಲವರು ಭಾಗಿಯಾಗಿದ್ದರು.ಇದನ್ನೂ ಓದಿ: UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Share This Article