10 ವರ್ಷಗಳಲ್ಲಿ ಬಿಜೆಪಿಗರು ಕೊಟ್ಟ ಭರವಸೆ ಈಡೇರಿಸಿದ್ದಾರಾ? – ಬಿಜೆಪಿ ಪ್ರಣಾಳಿಕೆಗೆ ಸಿಎಂ ವ್ಯಂಗ್ಯ

Public TV
2 Min Read

– ಹೆಚ್‍ಡಿಕೆ ಹೆಣ್ಣುಮಕ್ಕಳ ಬಗ್ಗೆ ಹೀಗೆ ಮಾತಾಡಿದ್ರೆ ಹೇಗೆ?

ಮಡಿಕೇರಿ: ಈಗ ಕೊಟ್ಟಿರುವ ಭರವಸೆಗಳಿರಲಿ, 10 ವರ್ಷಗಳಿಂದ ಕೊಟ್ಟಿರುವ ಭರವಸೆಗಳನ್ನು ಈಡೇರಿಸಿದ್ದಾರಾ? ಅವುಗಳ ಬಗ್ಗೆ ಚರ್ಚೆಯಾಗಬೇಕಾಗಿದೆ ಎಂದು ಬಿಜೆಪಿ ಪ್ರಣಾಳಿಕೆ (BJP manifesto) ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ವ್ಯಂಗ್ಯವಾಡಿದ್ದಾರೆ.

ಕೊಡಗಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. 2 ಕೋಟಿ ಉದ್ಯೋಗ ಸೃಷ್ಟಿಸಿದ್ದಾರಾ? ಮೇಕ್ ಇನ್ ಇಂಡಿಯಾ ಮಾಡುತ್ತೇವೆ ಎಂದಿದ್ದರು. ಮೇಕ್ ಇನ್ ಇಂಡಿಯಾ ಮಾಡಿದ್ದಾರಾ? ಅಚ್ಛೇದಿನ್ ಆಯೇಗಾ ಎಂದಿದ್ದರು, ಅಚ್ಛೇದಿನ್ ಬಂತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಲಿತರ ಮನೆಯಲ್ಲಿ ಉಪಾಹಾರ ಸೇವಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಎಲ್ಲಾ ಅಗತ್ಯ ವಸ್ತುಗಳ ಬೆಲೆ ಕಡಿಮೆ ಆಗಿದೆಯೇ? 2018 ರಲ್ಲಿಯೂ ಬಿಜೆಪಿ ಹಲವು ಭರವಸೆಗಳನ್ನು ನೀಡಿತ್ತು. ಅದರಲ್ಲಿ ಎಷ್ಟೋ ಭರವಸೆಗಳು ಇನ್ನೂ ಈಡೇರಿಸಿಲ್ಲ. ಬಿಜೆಪಿ ಯಾವತ್ತೂ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ಈಗಲೂ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಲ್ಲ. 25 ಕೋಟಿ ಉದ್ಯೋಗ ಸೃಷ್ಟಿಸಿದ್ದೇವೆ ಎನ್ನುತ್ತಾರೆ. ನಿಮಗೆ ಉದ್ಯೋಗ ಸಿಕ್ಕಿದೆಯಾ ಎಂದು ಯುವಕರನ್ನು ಪ್ರಶ್ನಿಸಿ, ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್‍ಡಿಕೆ (H.D Kumaraswamy) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದಾರಿತಪ್ಪಿದ್ದಾರೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದವರು. ಹೆಣ್ಣುಮಕ್ಕಳ ಬಗ್ಗೆ ಹೀಗೆ ಮಾತನಾಡಿದರೆ ಹೇಗೆ? ಹೆಣ್ಣುಮಕ್ಕಳು ಇದನ್ನು ಸಹಿಸಿಕೊಳ್ಳುತ್ತಾರಾ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಲೆ ಹೆಚ್ಚಳ ಮಾಡಿ ಗ್ಯಾರಂಟಿ ಯೋಜನೆ ಮಾಡಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆ ವಿಚಾರವಾಗಿ, ಮದ್ಯ ಹಾಗೂ ಸ್ಟಾಂಪ್ ಡ್ಯೂಟಿ ದರ ಹೆಚ್ಚಳದಿಂದ ಸರ್ಕಾರಕ್ಕೆ ಎಷ್ಟು ಆದಾಯ ಬರುತ್ತೆ ಎಂದು ವಿಜಯೇಂದ್ರಗೆ ಗೊತ್ತಾ? ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 58 ಸಾವಿರ ಕೋಟಿ ರೂ. ಬೇಕು. ದರ ಹೆಚ್ಚಳದಿಂದ ಸರ್ಕಾರಕ್ಕೆ ಇಷ್ಟು ಆದಾಯ ಬರುತ್ತಾ? ಸುಮ್ಮನೇ ಏನೋ ಹೇಳಬೇಕು ಎಂದು ಹೇಳುವುದಲ್ಲ ಎಂದು ವಿಜಯೇಂದ್ರಗೆ ಸಿಎಂ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: 3 ಕೋಟಿ ಬಡವರಿಗೆ ಮನೆ, ದೇಶದ 4 ದಿಕ್ಕುಗಳಿಗೂ ಬುಲೆಟ್‌ ಟ್ರೈನ್‌: ಮೋದಿ ಗ್ಯಾರಂಟಿ

Share This Article