ಚಾಮುಂಡೇಶ್ವರಿ ಕ್ಷೇತ್ರ ಗೆಲ್ಲಲು ಯಾರು ಊಹಿಸದ ರೀತಿಯಲ್ಲಿ ರಾಜಕೀಯ ದಾಳ ಉರುಳಿಸಿದ ಸಿಎಂ!

Public TV
1 Min Read

ಮೈಸೂರು: ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲವು ಸಾಧಿಸಬೇಕೆಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಯಾರು ಊಹಿಸದ ರೀತಿಯಲ್ಲಿ ರಾಜಕೀಯ ದಾಳವನ್ನ ಉರುಳಿಸಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ವೀರಶೈವ ನಾಯಕರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದೆಲ್ಲೆಡೆ ವಿರೋಧವಿದ್ದರೂ ಮೈಸೂರಿನಲ್ಲಿ ಮಾತ್ರ ಕೆಲ ವೀರಶೈವ ಮುಖಂಡರು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ ಎಂಬ ಅಚ್ಚರಿಯ ಸುದ್ದಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಮೈಸೂರು ವೀರಶೈವ ಮಹಾ ಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಬಹಿರಂಗವಾಗಿಯೇ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿರಲಿದೆ. ಸಿದ್ದರಾಮಯ್ಯ ವೀರಶೈವ ಲಿಂಗಾಯತರ ವಿರೋಧಿಯಲ್ಲ ಅಂತಾ ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ವೀರಶೈವ ಸಂಘಟನೆಗಳು ಮತ್ತು ಬಸವ ಬಳಗಗಳ ಪರವಾಗಿ ಇಂದು ಪ್ರಮಾಣ ಮಾಡಿ ಹೇಳುತ್ತೇನೆ ಅಂತಾ ಸಿಎಂ ಸಮ್ಮುಖದಲ್ಲಿಯೇ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಹಿನಕಲ್ ಬಸವರಾಜ್‍ರ ಹೊಗಳಿಕೆ ಮಾತುಗಳನ್ನು ಕೇಳಿ ಮಾತೇ ಬರದವರಂತೆ ಸಿಎಂ ಕೈಕಟ್ಟಿ ಕುಳಿತುಕೊಂಡಿದ್ದರು. ಈ ಹಿಂದೆ ಮುಖ್ಯಮಂತ್ರಿಗಳು ಧರ್ಮ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ ಅಂತಾ ಇದೇ ಬಸವರಾಜ್ ಕಿಡಿಕಾರಿದ್ದರು.

Share This Article
Leave a Comment

Leave a Reply

Your email address will not be published. Required fields are marked *