ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

Public TV
1 Min Read

ಹಾಸನ: ನಾವು ಬಿಜೆಪಿಯವರಿಗಿಂತ (BJP) ಜಾಸ್ತಿ ಕೆಲಸ ಮಾಡಿದ್ದೇವೆ. ಬಿಜೆಪಿಯವರು ಏನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಅಭಿವೃದ್ಧಿ ಕೆಲಸದಲ್ಲಿ ನಮ್ಮ ತಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ರೀತಿ ಕೆಲಸ ಮಾಡಿದ್ದಾರೆ ಎಂಬ ಯತೀಂದ್ರ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಬಿಜೆಪಿಯವರು ಏನು ಮಾಡಿಲ್ಲ, ಎಲ್ಲಾ ನಾವು ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

ದೆಹಲಿ ಭೇಟಿ ವಿಚಾರವಾಗಿ, ಹಿಂದುಳಿದ ವರ್ಗಗಳ ಸಮ್ಮೇಳನ ಇತ್ತು ಅದಕ್ಕೆ ಹೋಗಿದ್ದೆ. ನಾನು ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸದಸ್ಯ ಅದಕ್ಕಾಗಿ ಹೋಗಿದ್ದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಯತೀಂದ್ರ ಮಾತನಾಡುವಾಗ, ಮೈಸೂರು ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರಿಗಿಂತ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಇದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಯತೀಂದ್ರ ವಿರುದ್ಧ ವಿಪಕ್ಷಗಳ ನಾಯಕರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, ಸಿದ್ದರಾಮಯ್ಯ ಅವರು ದೇವರಾಜ ಅರಸುಗಿಂತ ದೊಡ್ಡವರು ಅಂತ ಹೇಳ್ತಿದ್ದರು. ಈಗ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವ್ರಿಗಿಂತ ದೊಡ್ಡವರಾಗಿದ್ದಾರೆ. 10 ಸಿಎಂ ಆಗಿಬಿಟ್ರೆ ನಾಡದೇವತೆ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

Share This Article