ರಾಯಚೂರಿಗೆ ಏಮ್ಸ್ ನೀಡಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು

Public TV
1 Min Read

ರಾಯಚೂರು: ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಏಮ್ಸ್ (AIIMS) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನ್ಸುಖ್ ಎಲ್. ಮಾಂಡವೀಯ ಗೆ ಪತ್ರ ಬರೆದಿದ್ದು, ಮಹತ್ವಾಕಾಂಕ್ಷೆ ಜಿಲ್ಲೆಯಾದ ರಾಯಚೂರು ಏಮ್ಸ್ ನೀಡಲು ಸೂಕ್ತ ಜಿಲ್ಲೆ ಅಂತ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಅಕ್ಷರ ಸಂತ ಹರೇಕಳ ಹಾಜಬ್ಬ ಮನವಿ

ಕಲ್ಯಾಣ ಕರ್ನಾಟಕ ಭಾಗ ನಮ್ಮ ಪ್ರಥಮ ಆದ್ಯತೆಯ ಪ್ರದೇಶವಾಗಿದೆ. ಹಿಂದುಳಿದ ಭಾಗವಾಗಿರುವ ರಾಯಚೂರಿಗೆ ಏಮ್ಸ್ ನೀಡಲು ಕ್ರಮ ಕೈಗೊಳ್ಳುವಂತೆ ಸಿಎಂ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕಳೆದ 400 ದಿನಗಳಿಂದ ಜಿಲ್ಲೆಯಲ್ಲಿ ಏಮ್ಸ್ ಗಾಗಿ ಅನಿರ್ಧಿಷ್ಠಾವಧಿ ಹೋರಾಟ ನಡೆದಿದೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏಮ್ಸ್ ಸ್ಥಾಪನೆ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಭರವಸೆ ನೀಡಿತ್ತು. ಕೇಂದ್ರಕ್ಕೆ ಪತ್ರ ಬರೆಯಲು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಸಹ ಒತ್ತಡ ತಂದಿದ್ದರು ಹೀಗಾಗಿ ಸಿಎಂ ಕೇಂದ್ರಕ್ಕೆ ಪತ್ರ ಬರೆದು ಏಮ್ಸ್ ಸ್ಥಾಪನೆಗೆ ಶಿಫಾರಸ್ಸು ಮಾಡಿದ್ದಾರೆ.

 

Share This Article