ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡನೆ – ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡಿಸೋದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ (Vidhana Soudha) ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್ 3 ರಿಂದ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಸದನವನ್ನ ಉದ್ದೇಶಿ ಮಾತನಾಡಲಿದ್ದಾರೆ. ಮಂಗಳವಾರ, ಬುಧವಾರ ಮತ್ತು ಗುರುವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 7 ರಂದು ಬಜೆಟ್ ಮಂಡನೆ ಮಾಡ್ತೀನಿ ಎಂದು ತಿಳಿಸಿದ್ದಾರೆ.

ಬಜೆಟ್‌ ಮಂಡಿಸಿದ ಬಳಿಕ ಅದರ ಮೇಲೆ ಚರ್ಚೆ ನಡೆದು ಮಾರ್ಚ್ ಕೊನೆಯಲ್ಲಿ ಉತ್ತರ ಕೊಡ್ತೀನಿ. ಅಧಿವೇಶನ ಎಷ್ಟು ದಿನ ನಡೆಯಬೇಕು ಅಂತ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡ್ತೀವಿ ಎಂದರು. ಇದನ್ನೂ ಓದಿ: ದೆಹಲಿ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ, ಬಿಕ್ಕಟ್ಟು ನಿರ್ವಹಣೆಗಾಗಿ ಎಐ ತಂತ್ರಜ್ಞಾನ ಬಳಕೆ

ಈ ಬಜೆಟ್ ನಲ್ಲಿ ಜನರಿಗೆ ಬೆಲೆ ಏರಿಕೆ ಶಾಕ್ ನಿಂದ ಮುಕ್ತಿ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬೆಲೆ ಏರಿಕೆ ಕೇಂದ್ರ-ರಾಜ್ಯ ಸರ್ಕಾರ ಮಾಡಬೇಕು. ಬೆಲೆ ಏರಿಕೆ ಕೇಂದ್ರ ಸರ್ಕಾರದ ಮೇಲೆ ಹೆಚ್ಚು ಭಾರ ಇರುತ್ತದೆ. ಕೇಂದ್ರ ಸರ್ಕಾರ ಬೆಲೆ ಏರಿಕೆಗೆ ಒತ್ತು ಕೊಡಬೇಕು. ರಾಜ್ಯ ಸರ್ಕಾರ ಎನ್ ಮಾಡಬೇಕೋ ಅದನ್ನ ಮಾಡುತ್ತದೆ ಅಂತ ತಿಳಿಸಿದರು. ಇದನ್ನೂ ಓದಿ: ರೈಲಿನ ಟಾಯ್ಲೆಟ್‌ನಲ್ಲಿ ಖೋಟಾನೋಟು – ಪಶ್ಚಿಮ ಬಂಗಾಳಕ್ಕೆ ತೆರಳಲಿರೋ ಬೆಂಗ್ಳೂರು ಪೊಲೀಸ್ರು

Share This Article