ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

1 Min Read

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತಾನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ ಸಮಸ್ಯೆ ಆಗಿದೆ. ಸಚಿವ ಮುನಿಯಪ್ಪ ಸರಿಯಾಗಿ ಮಾತನಾಡುತ್ತಾರೆ. ಅವರು ಕೇಂದ್ರದಲ್ಲಿ ಮಂತ್ರಿ ಆಗಿದ್ದವರು. ಅವರಿಗೆ ಎಲ್ಲವೂ ಗೊತ್ತಿದೆ. ಸಿದ್ದರಾಮಯ್ಯ ಬೇರೆ ಕಡೆ ಹೋಗಿಲ್ಲ, ಇಲ್ಲಿ ಮಾತ್ರ ಇದ್ದಾರೆ. ಅವರಿಗೆ ಅದಕ್ಕೆ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಕೇಂದ್ರ ಆದೇಶ

ಸಿಎಂ ಗ್ಯಾಸ್ ಅಭಾವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ರಾಜ್ಯ ಸರ್ಕಾರ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಗ್ಯಾಸ್ ತಡೆಯಬೇಕು. ಕೇಂದ್ರ ಸರ್ಕಾರ ಈಗಾಗಲೇ ಎಸ್ಮಾ ಜಾರಿ ಮಾಡಿದೆ. ಅಕ್ರಮ ಮಾರಾಟದ ವಿರುದ್ಧ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಇರಾನ್‌ ನಾವಿಕರ ಶವವನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

ಸಿದ್ದರಾಮಯ್ಯ ಈ ಸಮಯದಲ್ಲಿ ರಾಜಕೀಯ ಮಾಡೋದು ಬಿಡಲಿ. ರಾಜ್ಯದ ಜನರಿಗೂ ಮನವಿ ಮಾಡುತ್ತೇನೆ. ಯುದ್ಧದ ಸಮಯ ಇದು ಸಹಕಾರ ಕೊಡಬೇಕು. ಸಿದ್ದರಾಮಯ್ಯ ರಾಜಕೀಯ ಮಾಡೋದು ಬಿಟ್ಟು ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಗ್ಯಾಸ್ ಮಾರಾಟ ನಿಲ್ಲಿಸಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ

Share This Article