ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯಿಲ್ಲ : ಸಿದ್ದರಾಮಯ್ಯ ವಾಗ್ದಾಳಿ

Public TV
1 Min Read

ಬೆಂಗಳೂರು: ಸಂಸದ ಪ್ರತಾಪ್ ಸಿಂಹ (Pratap Simha) ಇನ್ನೂ ಎಳಸು, ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎಂದು ಹೇಳುತ್ತಾರೆ. ಅವರೇನು ಬೆಂಗಳೂರು ರಸ್ತೆಗೆ ಸಂಸದರೇ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ – ಗುಂಡಿನ ದಾಳಿಗೆ ಮಹಿಳೆ ಸೇರಿ 9 ಸಾವು

ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಹೊಂದಾಣಿಕೆ ಮಾಡಿಕೊಂಡಿದೆ ಎಂದು ಅವರು ಆರೋಪ ಮಾಡುತ್ತಿದ್ದಾರೆ. ಯಾರ್ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸಂಸದರೇ ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕು ಮಾಹಿತಿ ಇದ್ದರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ.

ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತನಾಡುವುದಿಲ್ಲ. ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದಿದ್ದಾರೆ.

ಬಿಜೆಪಿಗರು ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ. ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ, ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ ವಿಚಾರ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ – ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ

Share This Article