ಮಂಡ್ಯ: ಇದೇ ಜುಲೈ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಲಿದ್ದು, ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ.
ಅಂದಾಜು 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ ಮದ್ದೂರು (Maddur) ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಕಾಮಗಾರಿಗಳನ್ನ ಹಮ್ಮಿಕೊಳ್ಳಲಾಗಿದೆ. ಬೃಹತ್ ಕಾರ್ಯಕ್ರಮ ಆಯೋಜನೆಯ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. ಇದನ್ನೂ ಓದಿ: ಹಳಸಿದ ದಾಲ್ ಬಡಿಸಿದ್ದಕ್ಕೆ ಶಾಸಕನಿಂದ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ – ಕ್ಯಾಂಟೀನ್ ಲೈಸೆನ್ಸೇ ರದ್ದು
ಲೋಕೋಯೋಗಿ ಇಲಾಖೆಯ 81 ಕೋಟಿ ರೂ., ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ 12 ಕೋಟಿ ರೂ., ಕಾವೇರಿ ನೀರಾವರಿ ನಿಗಮ 300 ಕೋಟಿ ರೂ. ಸೇರಿದಂತೆ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ನಡೆಯಲಿದೆ. ಇದನ್ನೂ ಓದಿ: ಭಾರತಕ್ಕೆ ಚೀತಾಗಳ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ನಮೀಬಿಯಾಗೆ ಮೋದಿ ಕೃತಜ್ಞತೆ