ಮೂರು ದಿನಗಳ ಕಾಲ ಸಿಎಂ ಮೈಸೂರು ಪ್ರವಾಸ

Public TV
1 Min Read

ಮೈಸೂರು: ಲೋಕಸಭಾ ಚುನಾವಣಾ (Lok Sabha Election) ಅಖಾಡ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರು (Mysuru)ಹಾಗೂ ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಗ್ಗೆ 10:45ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಆಗಮಿಸಲಿದ್ದು, 11 ಗಂಟೆಗೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏ.2ಕ್ಕೆ ಬೆಳಗ್ಗೆ 10ಕ್ಕೆ ಶಂಕರಮಠಕ್ಕೆ ಸಿಎಂ ಭೇಟಿ ನೀಡಲಿದ್ದು, 11 ಗಂಟೆಗೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಸಂಜೆ 4ಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಸಭೆ ಹಾಗೂ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇದನ್ನೂ ಓದಿ:‌ ಎನ್‌ಡಿಎ ಅಧಿಕಾರಕ್ಕೆ ಬರುವ ಮೊದಲು ಕಂಪನಿಗಳು ಪಕ್ಷಗಳಿಗೆ ಎಷ್ಟು ದೇಣಿಗೆ ನೀಡಿದೆ ಹೇಳಬಹುದೇ – ಮೋದಿ ಪ್ರಶ್ನೆ

ಇನ್ನು ಏ.3ಕ್ಕೆ ಬೆಳಗ್ಗೆ 9:30ಕ್ಕೆ ಸುತ್ತೂರು ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬೆಳಗ್ಗೆ 10:35ಕ್ಕೆ ಚಾಮರಾಜನಗರ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಏ.3ಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆಯಲ್ಲೂ ಸಿಎಂ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಇಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

Share This Article