ನಾಡದೇವತೆಗೆ ರೇಷ್ಮೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ, ಡಿಸಿಎಂ!

Public TV
2 Min Read

– ಗೃಹಲಕ್ಷ್ಮಿಯ 2 ಸಾವಿರ ಕಾಣಿಕೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ (Chamundeshwari) ಹಸಿರು ಮತ್ತು ಕೆಂಪು ರೇಷ್ಮೆ ಸೀರೆ ಅರ್ಪಣೆ ಮಾಡಿ, ಗ್ಯಾರಂಟಿ ಕಾರ್ಡ್ (Guarantee Card) ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಈಡುಗಾಯಿ ಹೊಡೆದು ಇಬ್ಬರೂ ಹರಕೆ ತೀರಿಸಿದರು.

ಬಳಿಕ ಸರ್ಕಾರ 100 ದಿನ ಪೂರೈಸಿದ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ. ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಇದೇ ವೇಳೆ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಸಂಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ವಿರೋಧ ಪಕ್ಷಗಳು ಎಷ್ಟು ನಮ್ಮನ್ನ ದೂರ ಮಾಡಲು ಯತ್ನ ಮಾಡಿತ್ತಿದ್ಧಾರೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ ಎಂದು ಹೇಳಿದರು. ಇತ್ತ ಡಿಕೆಶಿ ಮಾತನಾಡಿ, ವಿರೋಧ ಪಕ್ಷಗಳು ನಮ್ಮಿಬ್ಬರ ಸಂಬಂಧ ವಿಚಾರದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಾ ಇರುತ್ತೀರಾ ಎಂದರು. ಇದನ್ನೂ ಓದಿ: ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆತ – ಹಿಂಭಾಗದ ಗಾಜು ಪುಡಿ ಪುಡಿ

ಬಿಜೆಪಿ ಸರ್ಕಾರದ ಹಗರಣ ವಿಚಾರದ ಕುರಿತು ಮಾತನಾಡಿ, ಅವರ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತೇವೆ. ಇದರಲ್ಲಿ ಟಾರ್ಗೆಟ್ ಎಂಬ ಪ್ರಶ್ನೆಯೇ ಇಲ್ಲ. ಪಿಎಸ್‍ಐ ಹಗರಣ, 40% ಹಗರಣ, ಕೋವಿಡ್ ಹಗರಣ ಎಲ್ಲದನ್ನೂ ತನಿಖೆಗೆ ಒಳಪಡಿಸಿದ್ದೇವೆ. ಹಗರಣದ ಬಗ್ಗೆ ತನಿಖೆ ಮಾಡಿಸಿದೆ ಇವರು ತಿಂದುಕೊಂಡು ಹಾಗೇ ಹೋಗಲಿ ಎಂದು ಬಿಡಬೇಕಾ. ಅವರ ಕಾಲದಲ್ಲೇ ಹಗರಣ ತನಿಖೆಗೆ ಆಗ್ರಹಿಸಿದ್ದೇವೆ. ಅವರು ತನಿಖೆ ಮಾಡಿಸಲಿಲ್ಲ. ನಾವು ತನಿಖೆ ಮಾಡಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯಿಂದ (BJP) ಇಂದು ಚಾರ್ಜ್ ಶೀಟ್ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ರು. ಭ್ರಷ್ಟಾಚಾರದಲ್ಲೆ ಇವರುಅಧಿಕಾರ ನಡೆಸಿದ್ರು. ನಮ್ಮ ಮೇಲೆ ಆರೋಪಮಾಡೊ ನೈತಿಕತೆ ಅವರಿಗೆ ಇಲ್ಲ. ಅವರು ಅಧಿಕಾರದಲ್ಲಿ ಇದ್ದಾಗ ಹಲವು ಹಗರಣ ಆಗಿದ್ದವು. ಅದರ ಮರು ತನಿಖೆ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಇದೇ ಸಿಎಂ ಹಾಗೂ ಡಿಸಿಎಂಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಥ್ ನೀಡಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್