ಸಿಎಂ ರಾಜೀನಾಮೆ ನಿಶ್ಚಿತ, ಖಾಲಿಯಾಗುವ ಸ್ಥಾನಕ್ಕೆ ಹಗ್ಗಜಗ್ಗಾಟ: ವಿಜಯೇಂದ್ರ ಟಾಂಗ್

Public TV
1 Min Read

ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ಕಾರಣ ಸಿಎಂ ಅವರು ನಿಶ್ಚಿತವಾಗಿ ರಾಜೀನಾಮೆ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B Y Vijayendra) ಭವಿಷ್ಯ ನುಡಿದಿದ್ದಾರೆ.ಇದನ್ನೂ ಓದಿ: ಕೌಟುಂಬಿಕ ಕಲಹ – ಸ್ನೇಹಿತನಿಗೆ ಸುಪಾರಿ ಕೊಟ್ಟು ಪತ್ನಿಯನ್ನೇ ಕೊಲೆ ಮಾಡಿಸಿದ ಪತಿ

ದೇವನಹಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯನವರು (CM Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ. ದಿನ ಬೆಳಗಾದರೆ, ನಾನೂ ಮುಖ್ಯಮಂತ್ರಿ ಆಗ್ಬೇಕು. ನನಗೂ ಆಸೆ ಇದೆ. ನಾನೇನೂ ಸನ್ಯಾಸಿ ಅಲ್ಲ ಎಂದು ಅನೇಕ ಕಾಂಗ್ರೆಸ್ (Congress) ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಎಂ.ಬಿ ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ.ದೇಶಪಾಂಡೆ ಮೊದಲಾದವರು ಹೇಳಿಕೆ ಕೊಟ್ಟಿದ್ದಾರೆ. ಮತ್ತೊಂದು ಕಡೆ ಇಂಥ ಹೇಳಿಕೆ ನಿಲ್ಲಿಸಲು ಸೂಚಿಸುವಂತೆ ಕಾಂಗ್ರೆಸ್ ಮುಖಂಡರೇ ಅವರ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದದಿಂದಲೇ ಕಾಂಗ್ರೆಸ್ಸಿನ ಹಿರಿಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಹಗ್ಗಜಗ್ಗಾಟ ಶುರುವಾಗಿದೆ. ಯಾವುದೇ ಸಂದರ್ಭದಲ್ಲಿ ಬೇಕಾದರೂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ನುಡಿದಿದ್ದಾರೆ.ಇದನ್ನೂ ಓದಿ: ಕುಡಿದ ನಶೆಯಲ್ಲಿ ಆಸ್ಪತ್ರೆಗೆ ಬಂದು ವೈದ್ಯ ರಂಪಾಟ – ನಶೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

Share This Article