ಸದೃಢ ಸಮಾಜಕ್ಕೆ ಉದ್ಯಮಶೀಲತೆ ಮುಖ್ಯ: ಅಶ್ವಥ್ ನಾರಾಯಣ್

Public TV
1 Min Read

– ಯುವ ಉದ್ಯಮಿಗಳಿಗೆ ನೆರವು, ಪ್ರೋತ್ಸಾಹ

ಧಾರವಾಡ: ಉದ್ಯಮಶೀಲರು ಸೋಲಿನಿಂದ ಧೃತಿಗೆಡದೇ ಸಮರ್ಥ ಮಾರ್ಗದರ್ಶನ, ಸ್ಪಷ್ಟ ಗುರಿಯೊಂದಿಗೆ ಸತತ ಪ್ರಯತ್ನ ಮಾಡಿದಾಗ ಯಶಸ್ಸು ಸಾಧ್ಯ, ದೇಶದಲ್ಲಿ ಕರ್ನಾಟಕವೇ ಮೊದಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಕಲಿಕೆಯೊಂದಿಗೆ ಕೌಶಲ್ಯ ಬೆಳೆಸಲು ಸಂಕಲ್ಪ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್.ಅಶ್ವಥ್ ನಾರಾಯಣ್ ಹೇಳಿದರು.

ಧಾರವಾಡದಲ್ಲಿ ವಿಶ್ವ ಉದ್ಯಮಶೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಇದೇ ಮೊದಲ ಬಾರಿಗೆ ವಿಶ್ವ ಉದ್ಯಮಶೀಲರ ದಿನ ಆಚರಿಸುತ್ತಿದೆ. ಸಮಾಜವನ್ನು ಸದೃಢವಾಗಿ ಕಟ್ಟಲು ಉದ್ಯಮಶೀಲತೆ ಬಹಳ ಮುಖ್ಯವಾಗಿದೆ. ಯುವಜನರಲ್ಲಿ ಸಂಚಲನ ಮೂಡಿಸಲು ಕೌಶಲ್ಯ ಬೆಳಸಲು 30 ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಹಾಗೂ ಕೈಗಾರಿಕಾ ಸಚಿವರಾಗಿದ್ದ ಆರ್.ವಿ.ದೇಶಪಾಂಡೆ ಅವರು ಧಾರವಾಡದಲ್ಲಿ ಸಿಡಾಕ್ ಸಂಸ್ಥೆ ಸ್ಥಾಪಿಸಿರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದರು. ಇದನ್ನೂ ಓದಿ: ಓಂ ಬೀಚ್‍ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಮುದ್ರ ಪಾಲಾದ

ಯಾವುದೇ ಉದ್ಯಮ ಯಶಸ್ಸಿಗೆ ವ್ಯಾಪಾರದ ಕೌಶಲ್ಯಗಳು ಅಗತ್ಯ. ಹಾಗಾದಾಗ ಮಾತ್ರ ಫಲ ಕಾಣಲು ಸಾಧ್ಯ. ವಿಜ್ಞಾನ, ತಂತ್ರಜ್ಞಾನದ ಯುಗದಲ್ಲಿ ಯಾವುದೇ ಹಳ್ಳಿಯಿಂದಲಾದರೂ ಬಂದಿರುವ ವ್ಯಕ್ತಿ ಉದ್ಯಮಶೀಲನಾಗಿ ಬೆಳೆಯಲು ಸಾಧ್ಯವಿದೆ. ಕೃಷಿ ಬೆಳೆ, ಉತ್ಪಾದನೆ ಮಾರುಕಟ್ಟೆ ಪರಸ್ಪರ ಅವಲಂಬಿತವಾಗಿವೆ, ಈಗಿನ ಡಿಜಿಟಲ್ ಮಾರುಕಟ್ಟೆ ತಂತ್ರಜ್ಞಾನ ಬಳಸಿಕೊಂಡು ವ್ಯವಹಾರ ಮಾಡುತ್ತಿರುವ ಸಂಸ್ಥೆಗಳನ್ನೇ ಆಧರಿಸಿ ನಮ್ಮ ಉದ್ಯಮಗಳನ್ನು ಸಶಕ್ತಗೊಳಿಸಬೇಕು ಎಂದರು.

Share This Article
Leave a Comment

Leave a Reply

Your email address will not be published. Required fields are marked *