RR ನಗರ ಕ್ಷೇತ್ರಕ್ಕಿಂದು ಚುನಾವಣೆ- ಪೊಲಿಟಿಕಲ್ ದೋಸ್ತಿ ಜೆಡಿಎಸ್-ಕಾಂಗ್ರೆಸ್‍ಗೆ ಮೊದಲ ಅಗ್ನಿ ಪರೀಕ್ಷೆ

Public TV
1 Min Read

ಬೆಂಗಳೂರು: ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಈ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿನಗರದಲ್ಲಿ ಇವತ್ತು ಮತದಾನ ನಡೆಯುತ್ತಿದೆ. ಅಪಾರ್ಟ್ ಮೆಂಟ್‍ನಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರದ ಚುನಾವಣೆಯನ್ನು ಮುಂದೂಡಲಾಗಿತ್ತು.

ಕ್ಷೇತ್ರವನ್ನು ಗೆದ್ದು ಸದಸ್ಯ ಬಲವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಹಪಹಪಿಸುತ್ತಿದ್ರೆ, ಮತ್ತೊಂದು ಕಡೆ ಮೈತ್ರಿಕೂಟದ ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿ ಕಣಕ್ಕಿಳಿದಿವೆ. ಇಂದು ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಆರ್ ಆರ್ ನಗರದಲ್ಲಿ 4 ಲಕ್ಷದ 71 ಸಾವಿರದ 459 ಮತದಾರರಿದ್ದು, ಒಟ್ಟು 421 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಬಿಜೆಪಿ ಪರ ಮುನಿರಾಜು ಕಣಕ್ಕೆ ಇಳಿದಿದ್ರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ ಕಣಕ್ಕೆ ಇಳಿದಿದ್ದಾರೆ. ಇನ್ನು ಜೆಡಿಎಸ್‍ನಿಂದ ನಟಿ ಅಮೂಲ್ಯ ಮಾವ ಜಿ.ಎಚ್.ರಾಮಚಂದ್ರ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡುವೆ ಬಿಜೆಪಿ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಆರ್.ಆರ್.ನಗರದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *