ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಕೇಸ್ – ಮಾಲೀಕ, ಮ್ಯಾನೇಜರ್ ವಿರುದ್ಧ FIR

1 Min Read

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನ (Bengaluru Airport) ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

- Advertisement -

ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ, ರಾಘವೇಂದ್ರ ರಾವ್ ಹಾಗೂ ಮ್ಯಾನೇಜರ್ ಸುಮಂತ್ ವಿರುದ್ಧ ಸುಳ್ಳು ದೂರು ನೀಡಿ, ಮಾನಹಾನಿ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು

- Advertisement -

- Advertisement -

ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿತ್ತು. ಈ ಕುರಿತು ಯುವಕರು ವಿಡಿಯೋ ಮಾಡಿದ್ದರು. ಇದೇ ಸಮಯಕ್ಕೆ ಕೆಫೆಗೆ ಹಣಕ್ಕೆ ಬೇಡಿಕೆಯಿಟ್ಟಿದ್ದ ಕರೆಯೊಂದು ಬಂದಿತ್ತು. ವಿಡಿಯೋ ಮಾಡಿದ್ದ ಯುವಕರೇ ಕರೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡಿದ್ದಾರೆಂದು ಆರೋಪಿಸಿ ಕೆಫೆ ಮಾಲೀಕರು ದೂರು ನೀಡಿದ್ದರು. ಆದರೆ ವಿಡಿಯೋ ಇಟ್ಟುಕೊಂಡು ಇನ್ನೋರ್ವ ಬ್ಲ್ಯಾಕ್‌ಮೇಲ್ ಮಾಡಿದ್ದ. ಬಳಿಕ ಈ ಪ್ರಕರಣ ವೈಯಾಲಿಕಾವಲ್ ಠಾಣೆಗೆ ಟ್ರಾನ್ಸ್ಫರ್ ಆಗಿತ್ತು.

- Advertisement -

ತನಿಖೆ ವೇಳೆ, ವಿಡಿಯೋ ಮಾಡಿದ್ದ ಯುವಕರು ಬ್ಲ್ಯಾಕ್‌ಮೇಲ್ ಮಾಡಿಲ್ಲ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆ ವಿಡಿಯೋ ಮಾಡಿದ್ದ ಯುವಕ, ತನ್ನ ಮೇಲೆ ಸುಳ್ಳು ಆಪಾದನೆ ಮಾಡಿದ್ದಾರೆಂದು ಏರ್‌ಪೋರ್ಟ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.

ಪ್ರಕರಣ ಸಂಬಂಧ ಕೇಸ್ ಏರ್‌ಪೋರ್ಟ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಕಾವೇರಿ ಟಿಫನ್ ರೂಂ ಬಳಿಕ ಸದಾಶಿವನಗರದಲ್ಲಿ `ತಿಂಡಿ’ ಮಾತು!

Share This Article