ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘನೆ – AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು

Public TV
1 Min Read

ಬೆಂಗಳೂರು: ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಆಮ್‌ ಆದ್ಮಿ ಪಕ್ಷದ (Aam Aadmi Party) ಅಭ್ಯರ್ಥಿ ವಿರುದ್ಧ ಮೊಕದ್ದಮ್ಮೆ ದಾಖಲಾಗಿದೆ.

ಎಎಪಿ ಅಭ್ಯರ್ಥಿ ಶ್ರೀನಿವಾಸ ರೆಡ್ಡಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ನಾಮಪತ್ರ ಸಲ್ಲಿಸುವಾಗ ರ‍್ಯಾಲಿಯಲ್ಲಿ ವಾಹನಗಳನ್ನು ಬಳಸಿಕೊಂಡಿದ್ದರು. ಇದಕ್ಕಾಗಿ ಪಕ್ಷದ ಚಿಹ್ನೆ ಮತ್ತು ಬಾವುಟವುಳ್ಳ 14 ವಾಹನಗಳು, ಟೀ ಶರ್ಟ್‌ ಬಳಕೆ ಮಾಡಲಾಗಿತ್ತು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್- ಪಕ್ಷೇತರನಾಗಿ ಸ್ಪರ್ಧೆ

ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ್ದಾರೆಂದು ಚುನಾವಣಾಧಿಕಾರಿಗಳು ವಾಹನಗಳು ಮತ್ತು ಟೀ ಶರ್ಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಮನೆಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬುಧವಾರದಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇದನ್ನೂ ಓದಿ: ಒಂದು ಲಕ್ಷ ಮತಗಳೊಂದಿಗೆ ಗೆಲುವು ಸಾಧಿಸುವೆ: ಪ್ರೀತಂ ಗೌಡ

Share This Article