ಕೆಂಪೇಗೌಡ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ – ಅಭಿಯಾನಕ್ಕೆ ಮಂಗಳೂರಿನಲ್ಲಿ ಚಾಲನೆ

Public TV
1 Min Read

ಮಂಗಳೂರು: ಬೆಂಗಳೂರಿನಲ್ಲಿ (Bengaluru) ನಿರ್ಮಾಣಗೊಳ್ಳುತ್ತಿರುವ ನಾಡಪ್ರಭು ಕೆಂಪೇಗೌಡರ (Kempe Gowda) 108 ಅಡಿ ಎತ್ತರದ ಕಂಚಿನ ಪ್ರತಿಮೆ (Bronze Statue) ನಿರ್ಮಾಣಕ್ಕೆ ಪವಿತ್ರ ಮಣ್ಣು (Soil) ಸಂಗ್ರಹಿಸಲಾಗುತ್ತಿದೆ. ಈ ಅಭಿಯಾನಕ್ಕೆ ಬುಧವಾರ ಮಂಗಳೂರಿನ (Mangaluru) ಲೇಡಿಹಿಲ್ ಬಳಿಯಿರುವ ಮನಪಾ ಈಜುಕೊಳದ ಆವರಣದಲ್ಲಿ ಚಾಲನೆ ದೊರಕಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಸುನಿಲ್ ಕುಮಾರ್ (Sunil Kumar), ಸುಸಜ್ಜಿತವಾದ ಪಟ್ಟಣ ಯಾವ ರೀತಿ ಇರಬೇಕೆಂಬ ಕಲ್ಪನೆಯಲ್ಲಿ ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಪ್ರಗತಿಯ ವೇಗದಲ್ಲಿ ಬೆಂಗಳೂರು ಇಂದು ನೂರುಪಟ್ಟು ಬೆಳೆದಿದೆ. ಆದರೆ ಇಡೀ ಬೆಂಗಳೂರು ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕಿದವರು ನಾಡಪ್ರಭು ಕೆಂಪೇಗೌಡರು. ಹಲವಾರು ಆಳರಸರಿಂದ ಇಂದು ನಮ್ಮ ರಾಜ್ಯ ನಿರ್ಮಾಣವಾಗಿದೆ. ಆ ಎಲ್ಲಾ ರಾಜ ಮನೆತನಗಳಿಗೆ ಗೌರವ ಕೊಡುವಂತಹ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿದೆ. ಅದರ ಭಾಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆ ನಿರ್ಮಾಣಗೊಳ್ಳುತ್ತಿದೆ ಎಂದರು.

ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಮಾತನಾಡಿ, ಇತಿಹಾಸದ ಪುಟಗಳನ್ನು ವಾಸ್ತವಿಕ ಆಧಾರದಲ್ಲಿ ಜನರಿಗೆ ನೀಡಬೇಕಾದ ಕಾರ್ಯ ಆಗಬೇಕಿದೆ. ಈವರೆಗೆ ನಾವು ತಿರುಚಿರುವ ಇತಿಹಾಸವನ್ನೇ ನಂಬಿದ್ದೆವು. ಆದರೆ ದೇಶಕ್ಕಾಗಿ ತ್ಯಾಗ ಮಾಡಿರುವವರ, ಸಾಧನೆಗೈದ ಮಹನೀಯರ ಸ್ಮರಿಸುವ ಕಾರ್ಯ ಆಗಬೇಕಿದೆ ಎಂದರು. ಇದನ್ನೂ ಓದಿ: ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಲೇ ಸ್ಟೇರಿಂಗ್ ಸಮಿತಿ ರಚನೆ – ಕರ್ನಾಟಕದ ಮೂವರಿಗೆ ಸ್ಥಾನ

ಈ ವೇಳೆ ಅಕ್ಟೋಬರ್ 26ರಿಂದ ನವೆಂಬರ್ 7ರ ವರೆಗೆ ರಾಜ್ಯಾದ್ಯಂತ ನಡೆಯಲಿರುವ ಮಣ್ಣು ಸಂಗ್ರಹ ಅಭಿಯಾನದ ಕೆಂಪೇಗೌಡ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಈ ರಥವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ, ಅಲ್ಲಿನ ಮಣ್ಣನ್ನು ಸಂಗ್ರಹಿಸಿ, ಬೆಂಗಳೂರಿನ ಕೆಂಪೇಗೌಡ ಥೀಮ್ ಪಾರ್ಕ್‌ನಲ್ಲಿ ಹಾಕಲಿದೆ. ಇದನ್ನೂ ಓದಿ: ಅಣ್ವಸ್ತ್ರವನ್ನು ಯಾರು ಕೂಡಾ ಆಶ್ರಯಿಸಬಾರದು: ರಷ್ಯಾಗೆ ರಾಜನಾಥ್ ಸಿಂಗ್ ಸಲಹೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *