ಖಾಸಗಿ ಬಸ್‍ಗೆ ಲಾರಿ ಡಿಕ್ಕಿ – ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Public TV
0 Min Read

ಹಾಸನ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹಾಸನ ನಗರದ ಬೈ ಪಾಸ್‍ನ ಬುಸ್ತೇನಹಳ್ಳಿ ಕೂಡುರಸ್ತೆ ಬಳಿ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂಬದಿಯಿಂದ ಬಂದ ಲಾರಿ ಬಸ್‍ಗೆ ಡಿಕ್ಕಿ ಹೊಡೆದಿದೆ.

ಬಸ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಸಂಪೂರ್ಣ ಜಖಂ ಆಗಿದೆ. ಈ ಅಪಘಾತದಿಂದ ಬಸ್ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *