ಅಂಧ ಸಹೋದರಿಯರ ಕಷ್ಟಕ್ಕೆ ಮಿಡಿದ ‘ಕಾಮಿಡಿ ಕಿಲಾಡಿಗಳು 3’ರ ದಾನಪ್ಪ

Public TV
2 Min Read

ಬೆಂಗಳೂರು: ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ರಿಯಾಲಿಟಿ ಶೋಗೆ ಶನಿವಾರ ಅದ್ಧೂರಿ ತೆರೆಬಿದ್ದಿದೆ. ಈ ಶೋನ ಎರಡನೇ ರನ್ನರ್ ಅಪ್ ಆದ ದಾನಪ್ಪ ಅವರು ಸರಿಗಮಪ ಸ್ಪರ್ಧಿಗಳಾದ ಅಂಧ ಸಹೋದರಿಯರು ರತ್ನಮ್ಮ ಮತ್ತು ಮಂಜಮ್ಮ ಅವರ ನೆರವಿಗೆ ನಿಂತಿದ್ದಾರೆ.

ಹೌದು. ದಾನಪ್ಪ ಅವರು ತಮಗೆ ಸಿಕ್ಕ ನಗದು ಬಹುಮಾನದಲ್ಲಿ 10 ಸಾವಿರ ರೂಪಾಯಿಯನ್ನು ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ನೀಡುವುದಾಗಿ ಗ್ರ್ಯಾಂಡ್ ಫಿನಾಲೆ ವೇದಿಕೆ ಮೇಲೆ ಘೋಷಿಸಿದ್ದಾರೆ. ದಾನಪ್ಪ ಅವರು ಅಂಧ ಸಹೋದರಿಯರ ಸಹಾಯಕ್ಕೆ ಮುಂದಾಗಿರೋದು ಎಲ್ಲರ ಮನಗೆದ್ದಿದೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್ – ಅಂಧ ಸೋದರಿಯರಿಗೆ ಮನೆ ರೆಡಿ

ಉಡುಪಿಯ ರಾಕೇಶ್ ‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ಪಟ್ಟ ತಮ್ಮದಾಗಿಸಿಕೊಂಡಿದ್ದು, ಹಾಸನದ ಸಂತೋಷ್ ರನ್ನರ್ ಅಪ್ ಆಗಿದ್ದಾರೆ. ಇತ್ತ ಕೋಳಿ ಕಳ್ಳ ಖ್ಯಾತಿಯ ಮನೋಹರ್ ಹಾಗೂ ಬಾ ಮಲಿಕೋ ಖ್ಯಾತಿಯ ದಾನಪ್ಪ ಅವರು ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವಿನ್ನರ್‍ಗೆ 8 ಲಕ್ಷ ರೂಪಾಯಿ ಹಾಗೂ ರನ್ನರ್ ಅಪ್‍ಗೆ 4 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದೆ. ಇತ್ತ ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡ ಮನೋಹರ್ ಹಾಗೂ ದಾನಪ್ಪ ಇಬ್ಬರಿಗೂ ಸೇರಿ 2 ಲಕ್ಷ ರೂ. ನಗದು ಬಹುಮಾನ ಹಾಗೂ ಟ್ರೋಪಿ ನೀಡಿ ಅಭಿನಂದಿಸಲಾಗಿದೆ. ಇದನ್ನೂ ಓದಿ: ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ

ಸರಿಗಪಮ ಶೋಗೆ ತುಮಕೂರಿನ ಮಧುಗಿರಿ ತಾಲೂಕಿನ ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಹೋದರಿಯರು ಬಂದಿದ್ದರು. ಈ ವೇಳೆ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಸಹೋದರಿಯ ನೋವಿನ ಕಥೆ ಕೇಳಿದ ಜಗ್ಗೇಶ್ ಅವರ ಕಷ್ಟಕ್ಕೆ ಸಹಾಯದ ಹಸ್ತ ಚಾಚಿದ್ದರು.

ಅಲ್ಲದೇ ಸಹೋದರಿಯರ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ “ದೇವರ ಮಕ್ಕಳ ಸ್ಥಿತಿಕಂಡು ಭಾವುಕನಾದೆ. ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು. ಆ ಕಾರ್ಯಕ್ಕೆ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದ ಫ್ರೆಂಡ್ಸ್ ಗ್ರೂಪ್‍ಗೆ ಜವಾಬ್ಧಾರಿ ನೀಡಿರುವೆ. ಈ ಕಲಾವಿದರ ಕೂಗು ರಾಯರ ಮಡಿಲು ಸೇರಿತು” ಎಂದು ಬರೆದುಕೊಂಡಿದ್ದರು. ಕೊಟ್ಟ ಮಾತಿನಂತೆ ಮನೆ ಕಟ್ಟಿಕೊಟ್ಟ ಜಗ್ಗೇಶ್ ಅವರು, ತಮ್ಮ ಪತ್ನಿ ಪರಿಮಳ ಅವರ ಜೊತೆ ಮಾರ್ಚ್ 12ರಂದು ಗೃಹಪ್ರವೇಶ ಮಾಡಿ ಮನೆಯ ಕೀಲಿಯನ್ನು ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ನೀಡಲಿದ್ದಾರೆ. ಈ ಬಗ್ಗೆ ಸ್ವತಃ ಜಗ್ಗೇಶ್ ಅವರೇ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಸಹೋದರಿಯರಿಗೆ ಹುಟ್ಟಿನಿಂದ ಕಣ್ಣಿಲ್ಲ. ಇವರು ಒಟ್ಟು ನಾಲ್ಕು ಜನ ಮಕ್ಕಳು, ಅವರಲ್ಲಿ ಇಬ್ಬರಿಗೆ ಕಣ್ಣಿಲ್ಲ. ಗಂಡು ಮಗ ಇದ್ದನು. ಆತನೂ ಕೂಡ ಕಾಯಿಲೆಯಿಂದ ಮೃತಪಟ್ಟಿದ್ದಾನೆ. ತಾಯಿಯೂ ಕೂಡ ಸಾವನ್ನಪ್ಪಿದ್ದು, ಅಜ್ಜಿ ಜೊತೆ ವಾಸವಾಗಿದ್ದಾರೆ. ತಂದೆಯೂ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಷ್ಟದಲ್ಲೂ ಅಂಧ ಸಹೋದರಿಯರು ಸಂಸಾರದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಊಟಕ್ಕಾಗಿ ರತ್ಮಮ್ಮ ಮತ್ತು ಮಂಜಮ್ಮ ಊರಿನ ದಂಡಿನ ಮಾರಮ್ಮ ದೇವಾಲಯದ ಮುಂದೆ ಹಾಡು ಹೇಳಲು ಶುರು ಮಾಡಿದ್ದರು. ಅಲ್ಲಿಗೆ ಬರುವ ಭಕ್ತರು ನೀಡುವ ಹಣದಿಂದ ಸಂಸಾರವನ್ನು ನಡೆಸುತ್ತಿದ್ದಾರೆ.

https://www.instagram.com/p/B88YTrMpH2C/

Share This Article
Leave a Comment

Leave a Reply

Your email address will not be published. Required fields are marked *