ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

1 Min Read

– ಒಂದೇ ತಿಂಗಳ ಅವಧಿಯಲ್ಲಿ 300 ರೂ. ಏರಿಕೆ

ನವದೆಹಲಿ: ಈಗಾಗಲೇ ಏಪ್ರಿಲ್ ತಿಂಗಳನ್ನ ದುಬಾರಿ ತಿಂಗಳು ಎಂದೇ ಕರೆಯಲಾಗುತ್ತಿದೆ. ಇದರ ಬೆನ್ನಲ್ಲಿಯೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್‌ ಕೊಟ್ಟಿದೆ.

ಗೃಹ ಬಳಕೆ ಸಿಲಿಂಡರ್ ಬೆಲೆ ಹೆಚ್ಚಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನ 195.50 ರೂಪಾಯಿ ಏರಿಕೆ ಮಾಡಿವೆ. ಈ ಮೂಲಕ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 2078.50 ರೂಪಾಯಿ ತಲುಪಿದೆ. ಇದನ್ನೂ ಓದಿ: ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಇದಕ್ಕೂ ಮೊದಲು, ಮಾರ್ಚ್ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನ 114.5 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಇದು ಕಳೆದ ಒಂದು ತಿಂಗಳಲ್ಲಿ 2ನೇ ಬಾರಿಗೆ ಮಾಡಿದ ಬೆಲೆ ಏರಿಕೆಯಾಗಿದೆ.

ಸದ್ಯ ಗೃಹಬಳಕೆ ಸಿಲಿಂಡರ್‌ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. 14.2 ಕೆಜಿ ಸಿಲಿಂಡರ್‌ ಬೆಲೆ ಮಾ.7 ರಂದು ಕೊನೆಯದ್ದಾಗಿ 60 ರೂ.ಗಳಿಗೆ ಹೆಚ್ಚಿಸಲಾಗಿತ್ತು. ದೆಹಲಿಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 913 ರೂ. ಬೆಲೆಗೆ ಮಾರಾಟವಾಗುತ್ತಿದೆ. ಇದನ್ನೂ ಓದಿ: ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY91 ವಿಮಾನಯಾನ ಸೇವೆ ಶೀಘ್ರವೇ ಆರಂಭ

ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿನಿಮಯ ದರಗಳ ಆಧಾರದ ಮೇಲೆ ಪ್ರತಿ ತಿಂಗಳ ಮೊದಲ ದಿನದಂದು ATF ಮತ್ತು LPG ಬೆಲೆಗಳನ್ನು ಪರಿಷ್ಕರಿಸುತ್ತವೆ.

ಮೊದಲೇ ಸಿಲಿಂಡರ್ ಸಿಗ್ತಿಲ್ಲ ಎಂದು ಹೋಟೆಲ್ ಉದ್ಯಮಿಗಳು ಪರದಾಡುತ್ತಿರುವ ಸಂದರ್ಭದಲ್ಲಿ ಈ ಬೆಲೆ ಏರಿಕೆ ಇನ್ನಷ್ಟು ಸಂಕಷ್ಟ ತಂದೊಡ್ಡಿದೆ. ಇದನ್ನೂ ಓದಿ: ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Share This Article