ಎಐ ಶೃಂಗದಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾಲಿನಿಂದ ಒದ್ದ ವೀಕ್ಷಕರು

1 Min Read

ನವದೆಹಲಿ: ಭಾರತ ಮಂಟಪದಲ್ಲಿ(Bharat Mandapam) ನಡೆಯುತ್ತಿರುವ ಜಾಗತಿಕ ಕೃತಕ ಬುದ್ದಿಮತ್ತೆ (AI) ಶೃಂಗಸಭೆಯಲ್ಲಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ (Yuva Congress) ಕಾರ್ಯಕರ್ತರನ್ನು ಸಾರ್ವಜನಿಕರು ಥಳಿಸಿದ್ದಾರೆ.

ಈ ಕಾರ್ಯಕ್ರಮ ವೀಕ್ಷಣೆಯ ಪಾಸ್‌ ಪಡೆದು ಸಭಾಂಗಣ ಪ್ರವೇಶಿಸಿದ ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ಶರ್ಟ್‌ ತೆಗೆದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದರು. ಅಮೆರಿಕದ ವಿರುದ್ಧ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಮೂಲಕ ಮೋದಿ ದೇಶವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಇದ್ದಕ್ಕಿಂದ್ದಂತೆ ಪ್ರತಿಭಟನೆ ನಡೆಸಿದ್ದರಿಂದ ಒಂದು ಕ್ಷಣ ಅಲ್ಲಿದ್ದವರು ದಂಗಾಗಿದ್ದಾರೆ. ಶರ್ಟ್‌ ಬಿಚ್ಚಿ ಪ್ರತಿಭಟಿಸಲು ಆರಂಭಿಸುತ್ತಿದ್ದಂತೆ ಶೃಂಗಸಭೆಯಲ್ಲಿ ಭಾಗಿಯಾಗಿದ್ದ ವೀಕ್ಷಕರು ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡು ಇಲ್ಲಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಜಾಗತಿಕ AI ಶೃಂಗದಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು

ಗರಂ ಆಗಿ ಪ್ರಶ್ನೆ ಮಾಡಿದ ಸಭಿಕರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಲಿನಿಂದ ಒದ್ದು ಭಾರತ್ ಮಂಟಪದ ಆವರಣದಿಂದ ಹೊರಕ್ಕೆ ಓಡಿಸಿದ್ದಾರೆ.

ವೀಕ್ಷಕರು ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಮತ್ತು ಕಾಲಿನಿಂದ ಒದಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Share This Article