ಅಶ್ಲೀಲ ಪದ ಬಳಸಿ ದೌರ್ಜನ್ಯ ಆರೋಪ – ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Public TV
1 Min Read

ನವದೆಹಲಿ: ದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ವಿಶೇಷ ಕರ್ತವ್ಯಾಧಿಕಾರಿ ಮೋಹನ್ ಕುಮಾರ್, ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರ ವಿಶೇಷ ಅಧಿಕಾರಿ ಹೆಚ್.ಆಂಜನೇಯ ನಡುವೆ ಜಗಳ ತಾರಕಕ್ಕೇರಿರುವ ಹೊತ್ತಲ್ಲೇ ಹೆಚ್.ಆಂಜನೇಯ (H Anjaneya) ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಾಗಿದೆ.

ಕರ್ನಾಟಕ ಭವನದಲ್ಲಿ ಉಪ ಸಮನ್ವಯಾಧಿಕಾರಿ ಮತ್ತು ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕುಸುಮಾ ನಂದರಿಗಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ (Karanataka State Commission for Womens) ದೂರು ನೀಡಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಹೆಚ್.ಆಂಜನೇಯ ಕರ್ನಾಟಕ ಭವನದ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದು, ಅಸಭ್ಯ ವರ್ತನೆಯ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಹೆಚ್.ಆಂಜನೇಯ ಅವರು ಪ್ರಸ್ತುತ ಕರ್ನಾಟಕ ಭವನದಲ್ಲಿ ಕಛೇರಿ ಅಧೀಕ್ಷಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಚೇರಿಯ ವಿಚಾರದಲ್ಲಿ ಲೆಕ್ಕ ಶಾಖೆಯ ಸಿಬ್ಬಂದಿಯನ್ನು ಕರೆದು ಬಾಯಿಗೆ ಬಂದ ಹಾಗೆ ಮಾತನಾಡುವುದಲ್ಲದೇ `ಲೆಕ್ಕಾಧಿಕಾರಿ ಏನು ಕತ್ತೆ ಕಾಯುತ್ತಿದ್ದಾಳಾ’ ಎಂದು ಆಗೌರವದಿಂದ ಮಾತನಾಡಿದ್ದಾರೆ. ನಿಮ್ಮನ್ನು ಅಮಾನತು ಮಾಡಿಸುತ್ತೇನೆ. ವಜಾ ಮಾಡಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

ಅಶ್ಲೀಲ ಅಸಭ್ಯ ಪದಗಳನ್ನು ಬಳಸಿ ಬೈಯುತ್ತಾ ಅಧಿಕಾರ ದರ್ಪ ತೋರುತ್ತಿದ್ದಾರೆ. ಅಲ್ಲದೇ ಮಹಿಳಾ ನೌಕರರ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಧಿಕಾರ ಬಳಸಿಕೊಂಡು ನನ್ನ ಭಡ್ತಿಯನ್ನು ತಡೆಯುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಗವಿ ಮಠದ ಆವರಣದಲ್ಲಿ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತ ಮುಸ್ಲಿಂ ಮಹಿಳೆ

ಈ ಬಗ್ಗೆ ಸಿಎಂಗೆ ದೂರು ನೀಡಿದ್ದು, ಪರಿಶೀಲಿಸಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇತ್ತ ಮಹಿಳಾ ಆಯೋಗದಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಬೆಳವಣಿಗೆಗೂ ಮುನ್ನ ಮೋಹನ್ ಕುಮಾರ್ ಮತ್ತು ಹೆಚ್.ಆಂಜನೇಯ ನಡುವಿನ ಜಗಳ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು.

Share This Article