ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ – ಸಿದ್ದಿಕಿ ಹತ್ಯೆಗೆ ಸರ್ಕಾರವೇ ಹೊಣೆ: ರಾಗಾ ಸಿಡಿಮಿಡಿ

Public TV
2 Min Read

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿದ್ದಿಕ್ಕಿ ಅವರ ಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ರಾಜ್ಯ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ರಾಗಾ, ಬಾಬಾ ಸಿದ್ದಿಕಿ ಜೀ ಅವರ ದುರಂತ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದೇನೆ, ತುಂಬಾ ನೋವು ತಂದಿದೆ. ಈ ಕಷ್ಟದ ಸಮಯದಲ್ಲಿ ನಾವು ಅವರ ಕುಟುಂಬದೊಂದಿಗೆ ಇರುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

ಅಲ್ಲದೇ ಈ ಭಯಾನಕ ಘಟನೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ (law and order) ಸಂಪೂರ್ಣ ಕುಸಿದಿರುವುದನ್ನು ಬಹಿರಂಗಪಡಿಸುತ್ತದೆ. ಸರ್ಕಾರವೇ ಇದರ ಜವಾಬ್ದಾರಿ ವಹಿಸಬೇಕು. ಸಿದ್ದಿಕಿ ಕುಟುಂಬಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಹತ್ಯೆ

ಈಗಾಗಲೇ ನಟಿ ಶಿಲ್ಪಾ ಶೆಟ್ಟಿ, ಸಲ್ಮಾನ್‌ ಖಾನ್‌, ಸಂಜಯ್‌ ದತ್‌, ರಾಜ್‌ ಕುಂದ್ರಾ, ಇನ್ನೂ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಬಾ ಸಿದ್ದಿಕ್ಕಿ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.

ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿದ ಭದ್ರತೆ:
ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೊಯ್‌ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದಂತೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಇದೀಗ ಸಿದ್ದಿಕ್ಕಿ ಹತ್ಯೆ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

ಏನಾಗಿತ್ತು?
ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.

Share This Article