ಬೆಂಗಳೂರು: ಮಂಡ್ಯ (Mandya) ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ (National Highway) ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಸೂಚಿಸಿದರು.
ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ (State Highway) ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಹೇಳಿದರು.ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ – ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್
ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ರಾಷ್ಟ್ರೀಯ ಹೆದ್ದಾರಿ 150 ಎಯಲ್ಲಿ ಕೆ.ಬಿ ಕ್ರಾಸ್‌ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೇಲ್ಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ; ನಟ ವಸಿಷ್ಠ ಸಿಂಹ ರಾಯಭಾರಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ಮತ್ತು ಅದಕ್ಕೆ ಸಂಪರ್ಕಿತ ಸರ್ವಿಸ್ ರಸ್ತೆಗಳಲ್ಲಿ ಬಾಕಿಯಿರುವ ಕಾಮಗಾರಿಗಳನ್ನು, ಹಾಗೆಯೇ ಬೆಂಗಳೂರಿನಿಂದ ಹಾಸನ, ಮೈಸೂರು-ಕೆ.ಆರ್. ಪೇಟೆ ಮತ್ತು ಮೈಸೂರು-ನಾಗಮಂಗಲ ರಸ್ತೆಗಳಿಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕ್ರಿಯೆ ಮತ್ತು ಇತರ ಕಾನೂನು ಕಾರ್ಯವಿಧಾನಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಕಠಿಣ ಕ್ರಮ: ಸಿದ್ದರಾಮಯ್ಯ
ಹಾಗೆಯೇ, ಮಂಡ್ಯ ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ಮತ್ತು ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್