12 ವಿದ್ಯಾರ್ಥಿನಿಯರಿಗೆ ಕಿರುಕುಳ – ಶಿಕ್ಷಕ ಅರೆಸ್ಟ್

Public TV
1 Min Read

ಲಕ್ನೋ: 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯೊಂದರ (Government School) ಕಂಪ್ಯೂಟರ್ ಶಿಕ್ಷಕನನ್ನು (Computer Instructor) ಉತ್ತರ ಪ್ರದೇಶದ (Uttar Pradesh) ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ಅಲಿ ಎಂದು ಗುರುತಿಸಲಾಗಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್ ಹಾಗೂ ಇನ್ನೋರ್ವ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಖಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

ಶಿಕ್ಷಕನ ಕಿರುಕುಳದ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದಾರೆ. ಬಳಿಕ ಪೋಷಕರು ಶಾಲೆಯ ಮುಖ್ಯ ಶೀಕ್ಷರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಆದರೆ ಈ ಬಗ್ಗೆ ಮುಖ್ಯ ಶಿಕ್ಷಕರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬಳಿಕ ಗ್ರಾಮದ ಮುಖಂಡರು ಹಾಗೂ ಪೊಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ವಿದ್ಯಾರ್ಥಿನಿಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯರಲ್ಲಿ ಕೆಲವರು ದಲಿತ ವಿದ್ಯಾರ್ಥಿನಿಯರಿದ್ದು, ಆರೋಪಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ (Scheduled Castes and Scheduled Tribes (Prevention of Atrocities)) ಹಾಗೂ ಪೋಕ್ಸೊ (POCSO) ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿದಂತೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಆಯತಪ್ಪಿ ಕೆರೆಗೆ ಬಿದ್ದು 4 ವರ್ಷದ ಬಾಲಕ ಸಾವು

Share This Article