ಬೆಂಗಳೂರು: ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy) ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ನಡೆದಿದೆ.
ಇಂದು (ಜ.30) ಕಾನ್ಫಿಡೆಂಡ್ ಗ್ರೂಪ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ರೀತಿ ಕಳೆದ ಮೂರು ವರ್ಷಗಳಿಂದ ಐಟಿ ದಾಳಿ ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಉದ್ಯಮಿ ಇಂದು ದಾಳಿ ವೇಳೆ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಶಿಡ್ಲಘಟ್ಟ ಕೇಸ್ – ಆರೋಪಿ ರಾಜೀವ್ ಗೌಡಗೆ ಜಾಮೀನು
ಘಟನೆ ಕುರಿತು ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಎಂ ಹಾಕೆ ಅವರು ಐಟಿ ಅಧಿಕಾರಿಗಳ ಬಳಿ ಮಾಹಿತಿ ಕಲೆಹಾಕುತ್ತಿದ್ದಾರೆ.

