ರಾಣಿ ಚನ್ನಮ್ಮ ವಿವಿ ಕುಲಪತಿಯನ್ನು ಹಿಡಿದು ನೂಕಾಡಿದ್ರು – ಪೀಠೋಪಕರಣ ಎತ್ತಿ ಎಸೆದ ಕೈ ಕಾರ್ಯರ್ತರು

Public TV
1 Min Read

ಬೆಳಗಾವಿ: ರಾಣಿಚನ್ನಮ್ಮ ವಿಶ್ವವಿದ್ಯಾಲಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಲಪತಿ ಶಿವಾನಂದ ಹೊಸಮನಿ ಅವರನ್ನು ಮುತ್ತಿಗೆ ಹಾಕಿ ನೂಕಾಡಿದ ಘಟನೆ ನಡೆದಿದೆ.

ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡದ್ದಕ್ಕೆ ಕೋಪಗೊಂಡ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುಣಗಾರ್ ಹಾಗೂ ಕೆಲವು ಬೆಂಬಲಿಗರು ಕುಲಪತಿ ಅವರನ್ನು ಮುತ್ತಿಗೆ ಹಾಕಿ ನೂಕಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಕುಲಪತಿ ಶಿವಾನಂದ ಹೊಸಮನಿ ಹಿಂದೇಟು ಹಾಕಿದ್ದಾರೆ. ವಿಶ್ವವಿದ್ಯಾಲಯಕ್ಕೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಾರ್ಯಕ್ರಮಕ್ಕೆ ಅಡ್ಡಿ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಆಗಿದ್ದು ಏನು?
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಇಂದು ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಸ್ಥಳೀಯ ಕೆಲವು ನಾಯಕರಿಗೆ ಆಹ್ವಾನ ನೀಡರಲಿಲ್ಲ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುಣಗಾರ್ ಹಾಗೂ ಕೆಲವು ಬೆಂಬಲಿಗರು ಕಾರ್ಯಕ್ರಮವನ್ನು ತಡೆದಿದ್ದಾರೆ.

ಕುಲಪತಿ ಶಿವಾನಂದ ಹೊಸಮನಿ ಅವರೊಂದಿಗೆ ವಾಗ್ವಾದಕ್ಕೆ ಇಳಿದ ಕಾಂಗ್ರೆಸ್ ಕಾರ್ಯಕರ್ತರು, ಪೀಠೋಪಕರಣಗಳನ್ನು ಎತ್ತಿ ಬೀಸಾಡಿದ್ದಾರೆ. ಕೆಲವರು ಕಿಟಕಿ ಗಾಜು ಒಡೆದು ಪುಂಡಾಟ ಪ್ರದರ್ಶಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ವಿಶ್ವವಿದ್ಯಾಲಯದ ಅನೇಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಇತ್ತ ಕುಲಪತಿ ಶಿವಾನಂದ ಹೂಗಾರ ಅವರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ರಕ್ಷಣೆಗೆ ನಿಲ್ಲಬೇಕಾಗಿತ್ತು. ಆದರೆ ಅವರು ಹಾಗೇ ಮಾಡದೇ ಗಲಾಟೆಯ ಕುರಿತು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಬಿಜೆಪಿ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಆದರೆ ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ಕೆಲವರು ಆರೋಪಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *