ಕಾಂಗ್ರೆಸ್ ಚಿಂತನಾ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ – ರಕ್ತಸ್ರಾವ, ಆಸ್ಪತ್ರೆಗೆ ದಾಖಲು

Public TV
1 Min Read

ದಾವಣಗೆರೆ: ಕಾಂಗ್ರೆಸ್ ಚಿಂತನಾ ಸಭೆಯಲ್ಲಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನಿಂದ ದಾವಣಗೆರೆ ನಗರದ ಬಾಪೂಜಿ ಎಂಬಿಎ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ.

ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹೂವಿನಮಡು ಚನ್ನಬಸಪ್ಪ ಮಾತನಾಡುವ ವೇಳೆ ಕಾಂಗ್ರೆಸ್ ಮುಖಂಡ ಮುದೇಗೌಡ ಗಿರೀಶ್ ಹಾಗೂ ಬೆಂಬಲಿಗರು ಅಡ್ಡಿ ಪಡಿಸಿದ್ದಾರೆ. ಇದೇ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು, ಜಗಳ ಹಲ್ಲೆಗೆ ತಿರುಗಿದೆ. ಇದನ್ನೂ ಓದಿ: ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

ಮುದೇಗೌಡ ಗಿರೀಶ್ ಬೆಂಬಲಿಗ ಮಲ್ಲಿಕಾರ್ಜುನ್ ಕೈ ಕಾರ್ಯಕರ್ತ ಶ್ರೀನಿವಾಸ್ ರವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಶ್ರೀನಿವಾಸ್‌ಗೆ ಗಾಯಗಳಾಗಿದ್ದು, ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗಿದೆ.

ದಲಿತರು ಮಾತನಾಡುವಾಗ ಧ್ವನಿ ಅಡಗಿಸುವ ಕೆಲಸ ಕಾಂಗ್ರೆಸ್‌ನ ಕೆಲ ಮುಖಂಡರು ಮಾಡುತ್ತಿದ್ದಾರೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಶ್ರೀನಿವಾಸ್ ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ ಬೆನ್ನಲ್ಲೇ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಇದನ್ನೂ ಓದಿ: ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ

ಹಲ್ಲೆ ನಡೆಸಿದ ಮಲ್ಲಿಕಾರ್ಜುನ್‌ನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸ್ ಮೇಲೆ ಹಳೇ ದ್ವೇಷದಿಂದ ಸುಖಾಸುಮ್ಮನೆ ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *