ಕೋವಿಡ್ ಪ್ರಕರಣ ಹೆಚ್ಚಲು ಕಾಂಗ್ರೆಸ್ ಪಾದಯಾತ್ರೆಯೂ ಕಾರಣ‌: ಸಚಿವ ಸುಧಾಕರ್

Public TV
2 Min Read

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿ ಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹರಿಹಾಯ್ದರು.

ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ಕಾಪಾಡಲು ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಿರುವುದಕ್ಕೆ ಅಭಿನಂದನೆ. ಅನೇಕ ಅಮಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಷ್ಟು ಮಂದಿಗೆ ಸೋಂಕು ಬಂದಿದೆ ಎಂದು ಗೊತ್ತಿಲ್ಲ. ಸರ್ಕಾರ ಪ್ರತಿಭಟನೆಯನ್ನು ತಡೆಯಲಿಲ್ಲ. ಆದರೆ ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಕೋರಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೋವಿಡ್ ನಿರ್ವಹಣೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಅಧಿಕಾರಿಗಳ ಸ್ಫೂರ್ತಿ ಕಳೆಯುವ ಕೆಲಸ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾನು ಮಾಜಿ ಪ್ರಧಾನಿ ಈಗ ಮೇಕೆದಾಟು ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಎಚ್‍ಡಿಡಿ

ಸಿಎಂ ಬಸವರಾಜ ಬೊಮ್ಮಾಯಿಯವರು ನೀರಾವರಿ ಕ್ಷೇತ್ರದಲ್ಲಿ ಆಳ ಜ್ಞಾನ ಹೊಂದಿದ್ದು, ಯಾವ ರೀತಿ ಹೋರಾಟ ಮಾಡಬೇಕೆಂಬುದು ತಿಳಿದಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರದೊಂದಿಗೆ ಕೈ ಜೋಡಿಸಬೇಕು. ಉತ್ತರ ಪ್ರದೇಶದ ಕಾಂಗ್ರೆಸ್ ನಿಗದಿ ಮಾಡಿದ್ದ ಧರಣಿಯನ್ನು ಮುಂದೂಡಿದೆ. ಅದೇ ರೀತಿ ಇಲ್ಲೂ ಕಾಂಗ್ರೆಸ್ ಮಾಡಬೇಕಿತ್ತು ಎಂದು ಹೇಳಿದರು.

ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿ, ನೋಟಿಸ್ ಜಾರಿ ಮಾಡಿ ಕ್ರಮ ವಹಿಸಿದೆ. ಬಂಧಿಸುವುದು, ಲಾಠಿ ಚಾರ್ಜ್ ಮಾಡುವುದು ದೊಡ್ಡ ವಿಚಾರವಲ್ಲ. ಆದರೆ ಇಂದಿನ ಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ. ಇದು ಅಂತರರಾಜ್ಯ ಸಮಸ್ಯೆಯಾಗಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಡಿಎಂಕೆ ಪಕ್ಷ ಯಾರೊಂದಿಗೆ ಸರ್ಕಾರ ರಚಿಸಿದೆ ಎಂದು ನೋಡಬೇಕು. ಅವರ ಹೈಕಮಾಂಡ್ ಜೊತೆಯೇ ಅವರು ಚರ್ಚೆ ಮಾಡಬಹುದಿತ್ತು ತಿರುಗೇಟು ನೀಡಿದರು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ

ಮಕ್ಕಳ ಚಿಕಿತ್ಸೆ
ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಶೇ.30 ರಷ್ಟು ಹಾಸಿಗೆಗಳನ್ನು ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯನ್ನು ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಎಲ್ಲಾ ಶಾಲೆಗಳಲ್ಲಿ 15 ದಿನಕ್ಕೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 4.89 ಕೋಟಿ ಜನರಿಗೆ ಮೊದಲ ಡೋಸ್, 3.98 ಕೋಟಿ ಜನರು ಎರಡನೇ ಡೋಸ್ ಪಡೆದಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಒಟ್ಟು 81.5% ಮಂದಿಗೆ ಎರಡೂ ಡೋಸ್ ನೀಡಲಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *