ಮಧ್ಯಪ್ರದೇಶ ಸಿಎಂ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

Public TV
2 Min Read

ಭೋಪಾಲ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ.

ಆನಂದ್ ಸಾಗರ್ ಅವರ 2008ರ ದೂರದರ್ಶನ ಕಾರ್ಯಕ್ರಮ ‘ರಾಮಾಯಣ’ದಲ್ಲಿ ಹನುಮಾನ್ ಪಾತ್ರಕ್ಕಾಗಿ ಮಸ್ತಲ್ ಹೆಚ್ಚು ಹೆಸರುವಾಸಿಯಾಗಿದ್ದರು. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷವು ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಭಾನುವಾರ) ಪ್ರಕಟಿಸಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಟಿಟಿ – 12 ಮಂದಿ ಸಾವು, 23 ಮಂದಿಗೆ ಗಾಯ

ಬುಧ್ನಿ ಕ್ಷೇತ್ರದಿಂದ ಚೌಹಾಣ್ ವಿರುದ್ಧ ವಿಕ್ರಮ್ ಮಸ್ತಲ್ ಕಣಕ್ಕಿಳಿಯಲಿದ್ದಾರೆ. ಮಧ್ಯಪ್ರದೇಶದಲ್ಲಿ ಪಕ್ಷವು ಚಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಮತ್ತು ಪಿಸಿಸಿ ಮುಖ್ಯಸ್ಥ ಕಮಲ್ ನಾಥ್ ಅವರನ್ನು ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ ರಘೀಗತ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇವರು ಕಮಲ್ ನಾಥ್ ಸರ್ಕಾರದಲ್ಲಿ ಸಚಿವರಾಗಿದ್ದರು.

ರಾಜ್ಯಸಭಾ ಮಾಜಿ ಸದಸ್ಯೆ ಹಾಗೂ ಸಚಿವೆ ವಿಜಯ್ ಲಕ್ಷ್ಮಿ ಸಾಧೋ ಅವರನ್ನು ಮಹೇಶ್ವರ್-ಎಸ್‌ಸಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮಾಜಿ ಕ್ಯಾಬಿನೆಟ್ ಸಚಿವ ಜಿತು ಪಟ್ವಾರಿ ಅವರನ್ನು ರಾವು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇದನ್ನೂ ಓದಿ: ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ

ಪಟ್ಟಿಯಲ್ಲಿ ಸಾಮಾನ್ಯ ವರ್ಗದಿಂದ 47, ಒಬಿಸಿ- 39, ಎಸ್‌ಟಿ- 30, ಎಸ್‌ಸಿ- 22, ಒಬ್ಬ ಮುಸ್ಲಿಂ ಮತ್ತು 19 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. 65 ಅಭ್ಯರ್ಥಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಬಿಜೆಪಿ ಈಗಾಗಲೇ ಮಧ್ಯಪ್ರದೇಶದ ಅರ್ಧದಷ್ಟು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 230 ಸ್ಥಾನಗಳ ಪೈಕಿ 136 ಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ನವೆಂಬರ್ 17 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್