ಬೆಂಗಳೂರು: ಬಿಬಿಎಂಪಿ ಕಚೇರಿಗೆ ನುಗ್ಗಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕೆಆರ್ ಪುರಂನ ಕಾಂಗ್ರೆಸ್ ಶಾಸಕ ಭೈರತಿ ಭಸವರಾಜ್ ಅವರ ಗೂಂಡಾ ಬಂಟ ನಾರಾಯಣ ಸ್ವಾಮಿಯನ್ನು ಕೊನೆಗೂ ಬಂಧಿಸಲಾಗಿದೆ.
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇದೀಗ ಭೈರತಿ ಬಸವರಾಜ್ ಚೇಲಾನನ್ನು ಬಂಧಿಸಿದ್ದಾರೆ. ಘಟನೆಯ ಬಳಿಕ ಪರಾರಿಯಾಗಿದ್ದ ನಾರಾಯಣಸ್ವಾಮಿ ತನ್ನ ಪ್ರೇಯಸಿಯ ಮನೆಯಲ್ಲಿ ಅವಿತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಶಾಸಕ ಭೈರತಿ ಬಸವರಾಜ್ ಬಂಟ ನಾರಾಯಣ ಸ್ವಾಮಿ ಅಮಾನತು
ಏನಿದು ಪ್ರಕರಣ?: ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನೂ ಆಗಿರುವ ನಾರಾಯಣಸ್ವಾಮಿ ಎನ್‍ಆರೈ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ ಚೆಂಗಲ್ ರಾಯಪ್ಪ ಅವರ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೇ ಘಟನೆಯ ಬಳಿಕ ತನ್ನ ಕೃತ್ಯಕ್ಕೆ ಸ್ಪಷ್ಟನೆ ಕೂಡ ನೀಡಿದ್ದ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಬಂಟ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿಯನ್ನು ಪಕ್ಷದಿಂದ ಅಮಾನತು ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ
https://www.youtube.com/watch?v=1hoUCWe-r14
https://www.youtube.com/watch?v=NiJf6PUT3Yo