ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಢಮಾರ್‌: ಸಿಟಿ ರವಿ

Public TV
1 Min Read

ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ (Congress Government) ಢಮಾರ್ ಆಗೋದು ಪಕ್ಕಾ ಎಂದು ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ (CT Ravi) ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ (Siddaramaiah) ಅವರ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ ಈಗ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್‌. ಡಿಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕಾ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೆ ಅವರಿಗೆ ಕೇಳಬೇಕು ಎಂದರು. ಇದನ್ನೂ ಓದಿ: ‘ಡಿ’ ಗ್ಯಾಂಗ್‌ಗೆ ಜೈಲೇ ಗತಿ – ಮತ್ತೆ 3 ದಿನ ನ್ಯಾಯಾಂಗ ಬಂಧನ ವಿಸ್ತರಣೆ

 

ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ರಾಜೀನಾಮೆಗೆ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ವಿವಿಧ ಹಗರಣದಗಳು ಸರ್ಕಾರದ ವಿರುದ್ಧ ಕೇಳಿ ಬಂದಿವೆ ಹೀಗಾಗಿ ಬಹಳ‌ ದಿನ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ ಎಂದು ತಿಳಿಸಿದರು.

 

Share This Article