180 ದಿನಗಳಾದರೂ ಕೆಲಸ ಸಿಗದ ನಿರುದ್ಯೋಗಿಗಳಿಗೆ ಯುವ ನಿಧಿ

Public TV
1 Min Read

ಬೆಂಗಳೂರು: ಕಾಂಗ್ರೆಸ್  (Congress) ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿ (Congress Guarantee) ಯೋಜನೆಗಳ ಜಾರಿಗೆ ಸಂಪುಟ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿ ಘೋಷಣೆ ಮಾಡಿರುವ ಗ್ಯಾರಂಟಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಯಾರು ಅರ್ಜಿ ಸಲ್ಲಿಕೆ ಮಾಡಬಹುದು?

ಯುವ ನಿಧಿ (Yuva Nidhi) ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24 ತಿಂಗಳ ಒಳಗೆ ಉದ್ಯೋಗ ಸಿಕ್ಕರೆ ಈ ಯೋಜನೆ ರದ್ದಾಗುತ್ತದೆ. ಯುವಕ, ಯುವತಿ ಹಾಗೂ ತೃತೀಯ ಲಿಂಗಿಗಳಿಗೂ ಈ ಯೋಜನೆ ಅನ್ವಯ ಆಗಲಿದೆ.

ಕೋರ್ಸ್ ಮುಗಿಸಿ 180 ದಿನಗಳಾದರೂ ಕೆಲಸ ಸಿಗದ ನಿರುದ್ಯೋಗಿಗಳಾಗಿರಬೇಕು. ವಯಸ್ಸಿನ ಮಿತಿ 18-25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಈ ಯೋಜನೆ ಅನ್ವಯಗೊಳ್ಳಲಿದೆ. ಅರ್ಜಿ ಸ್ವೀಕಾರಗೊಂಡ ದಿನದಿಂದ 24 ತಿಂಗಳು ಯುವನಿಧಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ 1 ರಿಂದ ಬಿಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿದವರಿಗೆ 10 ಕೆಜಿ ಅಕ್ಕಿಉಚಿತ

Share This Article