ಡಿಕೆಶಿ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ, ಅವ್ರ ಶ್ರಮಕ್ಕೆ ಫಲ ಸಿಗುತ್ತೆ: ಡಿಕೆ ಸುರೇಶ್‌

Public TV
2 Min Read

ಬೆಂಗಳೂರು: ಡಿಕೆ ಶಿವಕುಮಾರ್‌ (DK Shivakumar) ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ (DK Suresh) ಹೇಳಿದರು.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಸರ್ಕಾರದಿಂದ ಮತ್ತೊಂದು ಯಡವಟ್ಟು ನಡೆ – ಎಎಸ್‌ಪಿ ಬರಮಣ್ಣಿ ಸ್ವಯಂ ನಿವೃತ್ತಿ ಅಂಗೀಕಾರಕ್ಕೆ ಸೂಚನೆ

ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ (Congress Party) ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ, ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಇನ್ನೂ ʻಐದು ವರ್ಷ ನಾನೇ ಸಿಎಂʼ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿ, ಸಿಎಂ ಹೇಳಿರೋದ್ರಲ್ಲಿ ತಪ್ಪೇನಿದೆ? ಸಿಎಂ ಆಗಿರೋರು ಸಿಎಂ ಆಗಿ ಮುಂದುವರೆಯುತ್ತೇನೆ ಅಂದ್ರೆ ತಪ್ಪೇನು? ಅವರು ಶಾಸಕಾಂಗ ಪಕ್ಷದ ನಾಯಕರು ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್‌ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ

ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ನಾವು ಜನರ ಹಿತವನ್ನು ಕಾಪಾಡಬೇಕು. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಇವತ್ತೂ ಚೆನ್ನಾಗಿದ್ದಾರೆ, ನಾಳೆಯೂ ಚೆನ್ನಾಗಿರ್ತಾರೆ. ನಮ್ಮ ಹಣೆಬರಹದಲ್ಲಿ ಬರೆದಿರಬೇಕು. ನೀನು ಸಿಎಂ, ಶಾಸಕ ಆಗಬೇಕೆಂದು ಇರಬೇಕು ಎಂದು ನುಡಿದರು. ಇದನ್ನೂ ಓದಿ: ಹಾಸನ | ಕಳೆದ 24 ಗಂಟೆಯಲ್ಲಿ ಹೃದಯಾಘಾತದಿಂದ ನಾಲ್ವರು ಸಾವು – ಸಾವಿನ ಸಂಖ್ಯೆ 31ಕ್ಕೆ ಏರಿಕೆ

Share This Article