ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಫ್ಯಾಂಟಸಿ ಪೋಲ್‌ – ʻಇಂಡಿಯಾʼ ಒಕ್ಕೂಟಕ್ಕೆ 295 ಸೀಟ್‌ ಪಕ್ಕಾ: ರಾಗಾ ವಿಶ್ವಾಸ

Public TV
2 Min Read

ನವದೆಹಲಿ: 7 ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಬಹುಮತ ಎಂದು ಚುನಾವಣೋತ್ತರ ಸಮೀಕ್ಷೆಗಳು (Exit Poll 2024) ಭವಿಷ್ಯ ನುಡಿದಿವೆ.

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ (Rahul Gandhi), ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಮೀಡಿಯಾ ಪೋಲ್‌, ಮೋದಿ ಫ್ಯಾಂಟಸಿ ಪೋಲ್‌ (Modi Fantasy Poll) ಅಷ್ಟೇ ಎಂದು ಹೇಳಿದ್ದಾರೆ. ಇದೇ ವೇಳೆ ಇಂಡಿಯಾ ಒಕ್ಕೂಟ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಗಾ, ಸಿಧು ಮೂಸೆವಾಲಾ ಅವರ ಸಾಂಗ್‌ ಕೇಳಿದ್ದೀರಲ್ಲ 295?, 295 ಸ್ಥಾನ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆಚ್ಚು ಕಡಿಮೆ ಬಿಜೆಪಿ 5 ರಾಜ್ಯಗಳಲ್ಲಿ ಕ್ವೀನ್‌ ಸ್ವೀಪ್‌ ಮಾಡಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಏರಲು ಸರಳ ಬಹುಮತಕ್ಕೆ 272 ಸ್ಥಾನ ಬೇಕು. ಸದ್ಯ ಪ್ರಕಟವಾಗಿರುವ ಬಹುತೇಕ ಸಮೀಕ್ಷೆಗಳು ಎನ್‌ಡಿಎಗೆ 350+ ಸ್ಥಾನ ನೀಡಿವೆ. ಅದರಲ್ಲೂ ಟುಡೇಸ್‌ ಚಾಣಕ್ಯ ಬಿಜೆಪಿ 335 ± 15, ಎನ್‌ಡಿಎ 400 ± 15 ಸ್ಥಾನ ನೀಡಿದೆ. ಇದನ್ನೂ ಓದಿ: Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌!

ಇಂಡಿಯಾ ಟುಡೆ ಸಮೀಕ್ಷೆ ಈ ಬಾರಿಗೆ ಎನ್‌ಡಿಎಗೆ 361-401, ಇಂಡಿಯಾ ಒಕ್ಕೂಟಕ್ಕೆ 131-166, ಇತರರಿಗೆ 8-20 ಸ್ಥಾನಗಳನ್ನು ನೀಡಿದೆ. ಈ ಪೈಕಿ 7 ರಾಜ್ಯಗಳಲ್ಲಿ ಬಿಜೆಪಿ ಬಹುತೇಕ ಕ್ಲೀನ್‌ ಸ್ವೀಪ್‌ ಮಾಡಬಹುದು. ದಕ್ಷಿಣ ರಾಜ್ಯ ತಮಿಳುನಾಡಿನಲ್ಲಿ ಕನಿಷ್ಠ 1-3 ಖಾತೆಗಳನ್ನು ತೆರೆಯುವ ಮೂಲಕ ಐತಿಹಾಸಿಕ ಸಾಧನೆಗೆ ಬಿಜೆಪಿ ಸಾಕ್ಷಿಯಾಗಲಿದೆ ಎಂದು ಭವಿಷ್ಯ ನುಡಿದಿವೆ. ಇದನ್ನೂ ಓದಿ: ಕಾಡುಗಳ್ಳ ವೀರಪ್ಪನ್ ಕೊಂದಿದ್ದ ಪೊಲೀಸ್ ಅಧಿಕಾರಿ ನಿವೃತ್ತಿ ಹಿಂದಿನ ದಿನವೇ ಸಸ್ಪೆಂಡ್ 

Share This Article