ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧ ಆಯ್ಕೆ

Public TV
1 Min Read

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿ ನಾಯಕರಾದ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಕೂಡ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಕಣದಲ್ಲಿ ಬೇರೆ ಯಾರೂ ಸ್ಪರ್ಧಿಗಳು ಇಲ್ಲದ ಕಾರಣ, ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

 

ಅಧಿಕಾರಾವಧಿ ಕೊನೆಗೊಳ್ಳಲಿರುವ 3 ರಾಜ್ಯಸಭಾ ಸಂಸದರು ಯಾರು?
ರಾಜ್ಯಸಭಾ ಸದಸ್ಯರಾದ ಮನಮೋಹನ್ ಸಿಂಗ್ (ಕಾಂಗ್ರೆಸ್) ಮತ್ತು ಭೂಪೇಂದ್ರ ಯಾದವ್ (ಬಿಜೆಪಿ) ಅವರ ಅವಧಿ ಏಪ್ರಿಲ್ 3 ರಂದು ಮುಕ್ತಾಯಗೊಳ್ಳಲಿದೆ. ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರು ಶಾಸಕರಾಗಿ ಆಯ್ಕೆಯಾದ ನಂತರ ಸದನಕ್ಕೆ ರಾಜೀನಾಮೆ ನೀಡಿದ್ದರು.

Share This Article