ಅಮಿತ್‌ ಶಾ ವಿಡಿಯೋ ಅಪ್ಲೋಡ್‌ – ಕೈ ನಾಯಕರಿಗೆ ಎಕ್ಸ್‌ನಿಂದ ನೋಟಿಸ್‌

Public TV
1 Min Read

ನವದೆಹಲಿ: ಗೃಹ ಸಚಿವ ಅಮಿತ್‌ ಶಾ (Amit Shah) ಅವರ ರಾಜ್ಯಸಭಾ ಭಾಷಣದ ವಿಡಿಯೋವನ್ನು ಅಪ್ಲೋಡ್‌ ಮಾಡಿದ ಕಾಂಗ್ರೆಸ್‌ ನಾಯಕರಿಗೆ (Congress Leaders) ಎಕ್ಸ್‌ನಿಂದ ನೋಟಿಸ್‌ ಬಂದಿದೆ.

ಕೇಂದ್ರ ಗೃಹ ಸಚಿವಾಲಯದ (Ministry of Home Affairs) ಸೂಚನೆಯ ಮೇರೆಗೆ ಎಕ್ಸ್‌ನಿಂದ ನೋಟಿಸ್‌ ಬಂದಿದೆ ಎಂದು ಕಾಂಗ್ರೆಸ್‌ ಮೂಲಗಳನ್ನು ಆಧಾರಿಸಿ ವರದಿಯಾಗಿದೆ.

ಬುಧವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ್ದ ಅಮಿತ್‌ ಶಾ, ಹಿಂದೆ ನರೇಂದ್ರ ಮೋದಿ (Narendra Modi) ಅವರ ಭಾಷಣವನ್ನು ತಿರುಚಿ ಪ್ರಸಾರ ಮಾಡಲಾಗಿತ್ತು. ಈಗ ನನ್ನ ಭಾಷಣದ ವಿಡಿಯೋವನ್ನು ತಿರುಚಿ ಪ್ರಸಾರ ಮಾಡಲಾಗಿದೆ. ತಿರುಚಿ ಅಪ್ಲೋಡ್‌ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

 


ಏನಿದು ವಿವಾದ?
ಸಂವಿಧಾನ ಚರ್ಚೆಯಲ್ಲಿ ಭಾಗಿಯಾಗಿ ರಾಜ್ಯಸಭೆಯಲ್ಲಿ ಅಮಿತ್‌ ಶಾ ಮಾತನಾಡುತ್ತಿದ್ದರು. ಈ ವೇಳೆ ಕಾಂಗ್ರೆಸ್‌ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದೆ ಎಂದು ವಿವರಿಸುವ ಸಂದರ್ಭದಲ್ಲಿ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಕೆಲವರಿಗೆ ಈಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದರೆ ಏಳೆಂಟು ಜನ್ಮ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಹೇಳಿದ ವಿಡಿಯೋ ತುಣಕನ್ನು ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ಅಮಿತ್‌ ಶಾ ವಿರುದ್ಧ ಕಿಡಿಕಾರಿದೆ.

Share This Article