– ಡಿಕೆಶಿ ಗೋ ಬ್ಯಾಕ್ ಗೆ ಸಿದ್ಧತೆ
ಮಂಡ್ಯ: ನಟ ನಿಖಿಲ್ ಕುಮಾರಸ್ವಾಮಿ ಬೆನ್ನಲ್ಲೇ ಇದೀಗ ಮಂಡ್ಯದಲ್ಲಿ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ `ಡಿಕೆಶಿ ಗೋ ಬ್ಯಾಕ್’ ಅನ್ನೋದಕ್ಕೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸಿದ್ಧತೆ ನಡೆಸುತ್ತಿದ್ದಾರೆ.
ಡಿಕೆಶಿ ವಿರುದ್ಧ ಹೋರಾಟಕ್ಕೆ ನಿರ್ಧರಿಸಿರುವ ಮಂಡ್ಯ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಬಂದರೆ ಸ್ವಾಗತಿಸುತ್ತೇವೆ. ಆದ್ರೆ ಜೆಡಿಎಸ್ ಏಜೆಂಟಾಗಿ ಬಂದರೆ ‘ಗೋ ಬ್ಯಾಕ್ ಡಿಕೆಶಿ’ ಹೆಸರಲ್ಲಿ ಹೋರಾಟ ಮಾಡುವುದಾಗಿ ಮಂಡ್ಯದಲ್ಲಿ ಕಾಂಗ್ರೆಸ್ ಮುಖಂಡ, ನಗರಸಭೆ ಮಾಜಿ ಸದಸ್ಯ ಅನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
1994ರಲ್ಲಿ ಕನಕಪುರದಿಂದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪಕ್ಷೇತರವಾಗಿ ನಿಂತು ಗೆದ್ದಿದ್ದೀರಿ. ಅವತ್ತೇ ನಿಮ್ಮ ವಿರುದ್ಧ ಕ್ರಮ ತೆಗೆದುಕೊಂಡಿದ್ರೆ ಇವತ್ತು ನೀವು ಕಾಂಗ್ರೆಸ್ ನಾಯಕರಾಗುತ್ತಿರಲಿಲ್ಲ. ನಿಖಿಲ್ ಸ್ಪರ್ಧಿಸಲೇಬೇಕಿದ್ರೆ ರಾಮನಗರದಲ್ಲಿ ನಿಲ್ಲಿಸಿಕೊಳ್ಳಲಿ. ಅಪ್ಪ-ಮಗ ಅವ್ವ ಎಲ್ಲಾ ಒಂದೇ ಕ್ಷೇತ್ರದಲ್ಲಿ ಇರಲಿ. ಅಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಷ್ಟ, ಸುಖ ಕೇಳೋದಕ್ಕೆ ನೀವು ಸಚಿವರಾಗಿದ್ದೀರಿ. ನಿಮ್ಮ ಬಾಮೈದ ಎಂಎಲ್‍ಸಿ ಆಗಿದ್ದಾರೆ. ಮಂಡ್ಯದಲ್ಲಿ ಯಾವೊಬ್ಬ ಕಾಂಗ್ರೆಸ್ ಜನಪ್ರತಿನಿಧಿ ಇಲ್ಲ. ನಮ್ಮ ಕಷ್ಟ ಸುಖ ಕೇಳೋದಕ್ಕೆ ಅಂತಾಲೇ ಸುಮಲತಾ ಗೆಲ್ಲಿಸಿಕೊಂಡು ಬರ್ತೀವಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರಿಗೆ, ಪಕ್ಷ ಉಳಿಸಲು ಸಭೆ ಕರೆದರೆ ಒಪ್ಪಿಗೆ ಇದೆ. ಜೆಡಿಎಸ್ ಪರವಾಗಿ, ಜೆಡಿಎಸ್ ಗೆ ಚುನಾವಣೆ ಮಾಡಿ ಎಂದು ಸಭೆ ಕರೆದರೆ ಬಹಿಷ್ಕರಿಸುತ್ತೇವೆ. ಕಾಂಗ್ರೆಸ್ ನಿಂದ ಸುಮಲತಾಗೆ ಟಿಕೆಟ್ ಕೊಡದಿದ್ದರೂ ಪಕ್ಷೇತರವಾಗಿ ನಿಲ್ಲಿಸಿ ಗೆಲ್ಲಿಸುತ್ತೇವೆ. ನಾಯಕರಿಗೆ ಪಕ್ಷದಿಂದ ಅಮಾನತು, ನೋಟಿಸ್ ಕೊಡುವುದಾಗಿ ಬೆದರಿಕೆ ಹಾಕಿದ್ರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv