ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಕ್ರಮ – ಮಧು ಬಂಗಾರಪ್ಪ

Public TV
1 Min Read

ಬೆಂಗಳೂರು: ಅತಿಥಿ ಶಿಕ್ಷಕರು (Guest Teachers) ಮತ್ತು ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವ ಸಂಬಂಧ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡೋದಾಗಿ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಧನಂಜಯ ಸರ್ಜಿ ಪ್ರಶ್ನೆ ಕೇಳಿದ್ರು. ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ. ಮಾಸಿಕ ಸಂಭಾವನೆ ಹೆಚ್ಚು ಮಾಡಬೇಕು. ಅತಿಥಿ ಶಿಕ್ಷಕರಿಗೆ ಮತ್ತು ಉಪಸ್ಯಾಕರಿಗೆ ಗ್ರೂಪ್‌-ಡಿ ಸಿಬ್ಬಂದಿ, ಸೆಕ್ಯುರಿಟಿಗಳಿಗೆ ಸಿಗೋ ಸಂಬಳ ಸಿಗುತ್ತಿಲ್ಲ. ಹೀಗಾಗಿ ಸರ್ಕಾರ ಸಂಬಳ ಜಾಸ್ತಿ ಮಾಡಬೇಕು ಅಂತ ಒತ್ತಾಯ ಮಾಡಿದ್ರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2022 ರಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸ ವೇತನ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯವ್ರು ಮುಸ್ಲಿಂ ಮೀಸಲಾತಿ ಹಿಂಪಡೆದು ಒಕ್ಕಲಿಗ, ಲಿಂಗಾಯತ ಸಮುದಾಯಗಳಿಗೆ ಹಂಚಿದ್ರು: ಸಿಎಂ

ಈಗಾಗಲೇ ಆರ್ಥಿಕ ಇಲಾಖೆಗೆ ಮನವಿ ಮಾಡಿದ್ವಿ. ಆದ್ರೆ ಅವರು ಕಡತ ವಾಪಸ್ ಕಳಿಸಿದ್ದಾರೆ. ಮತ್ತೊಮ್ಮೆ ನಾನು ಆರ್ಥಿಕ ಇಲಾಖೆಗೆ ಮನವಿ ಮಾಡ್ತೀನಿ. ಅತಿಥಿ ಶಿಕ್ಷಕರಿಗೆ ವೇತನ ಹೆಚ್ಚಳ ಆಗಬೇಕು. ಆರ್ಥಿಕ ಇಲಾಖೆ ಜೊತೆ ಮಾತಾಡಿ ವೇತನ ಹೆಚ್ಚಳ ಮಾಡೋ ಬಗ್ಗೆ ಕ್ರಮವಹಿಸುತ್ತೇವೆ ಎಂದರು. ಇದನ್ನೂ ಓದಿ: ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

Share This Article