ಡ್ರಗ್ಸ್ ಕೇಸ್- ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖಯರಾ ಬಂಧನ

Public TV
1 Min Read

ಚಂಡೀಗಢ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖಯರಾರನ್ನು (Congress MLA Sukhpal Singh Khaira) ಬಂಧಿಸಲಾಗಿದೆ.

2015ರ ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಡ್ರಗ್ಸ್ ಆ್ಯಂಡ್ ಸೈಕೋಟ್ರಾಪಿಕ್ ಸಬ್‍ಸ್ಟನ್ಸಸ್ ಆ್ಯಕ್ಟ್ ಅಡಿಯಲ್ಲಿ ಸುಖಪಾಲ್ ಅವರನ್ನು ಜಲಾಲಬಾದ್ ಪೊಲೀಸರು (Jalalabad police station) ಇಂದು ಬೆಳಗ್ಗೆ 6.30ರ ಸುಮಾರಿಗೆ ಬಂಧಿಸಿದ್ದಾರೆ.

ಚಂಡೀಗಢದಲ್ಲಿರುವ ನಿವಾಸದಲ್ಲಿ ಸುಖಪಾಲ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ. ಬಂಧನದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಬಂಧನಕ್ಕೂ ಮೊದಲು ಸುಖಪಾಲ್ ಅವರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಹಾಗೆಯೇ ಬಂಧನದ ಘಟನೆಯನ್ನು ಫೇಸ್‍ಬುಕ್ ಲೈವ್ ಮೂಲಕ ಜನರಿಗೆ ತೋರಿಸಿದ್ದಾರೆ.

ಸುಖಪಾಲ್ ಸಿಂಗ್ ಖೈರಾ ಅವರನ್ನು 2021ರಲ್ಲೂ ಬಂಧನಕ್ಕೊಳಪಡಿಸಲಾಗಿತ್ತು. ಅಕ್ರಮವಾಗಿ ಮಾದಕವಸ್ತು ಸಾಗಣೆ, ಮಾದಕವಸ್ತು ದಂಧೆ, ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಸುಖಪಾಲ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ನಡುವೆ ನಕಲಿ ಪಾಸ್‍ಪೋರ್ಟ್ ಪ್ರಕರಣವೂ ಸುಖಪಾಲ್ ಖೈರಾ ವಿರುದ್ಧ ಕೇಳಿಬಂದಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್