ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ (Parappana Agrahara Jail) ಬಿಡುಗಡೆಯಾದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ (Veerendra Pappi) ಅವರನ್ನು ಅಭಿಮಾನಿಗಳು ಹೂವಿನಹಾರ ಹಾಕಿ ಸಂಭ್ರಮಿಸಿ ಸ್ವಾಗತಿಸಿದ್ದಾರೆ.
ಜನಪ್ರತಿನಿಧಿಗಳ ಕೋರ್ಟ್‌ನಿಂದ ಇಂದು ಜಾಮೀನು (Bail) ಸಿಕ್ಕಿದ ಹಿನ್ನೆಲೆಯಲ್ಲಿ ಸಂಜೆಯಿಂದಲೇ ಅಭಿಮಾನಿಗಳು ಪರಪ್ಪನ ಅಗ್ರಹಾರ ಜೈಲಿನ ದಾರಿಯಲ್ಲಿ ಕಾಯುತ್ತಿದ್ದರು. ಕಾರಿನಲ್ಲಿ ವೀರೇಂದ್ರ ಪಪ್ಪಿ ಬರುತ್ತಿದ್ದಂತೆ ಸುತ್ತುಗಟ್ಟಿದ ಅಭಿಮಾನಿಗಳು ಘೋಷಣೆಗಳನ್ನು ಕೂಗಿ ಜೈಕಾರ ಹಾಕಿದರು. ಕಾರಿನಿಂದ ಇಳಿದ ಶಾಸಕರು ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ಮಾಡಿ ಸಂತಸ ವ್ಯಕ್ತಪಡಿಸಿದರು.
ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ (PMLA) ವೀರೇಂದ್ರ ಪಪ್ಪಿಯನ್ನ ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ಚಿತ್ರದುರ್ಗ, ಬೆಂಗಳೂರು ಸೇರಿದಂತೆ ವೀರೇಂದ್ರ ಪಪ್ಪಿ ಮನೆ, ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದನ್ನೂ ಓದಿ: ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿರೋ ಜೈಶಂಕರ್

